ಚೆನ್ನೈ : ತಮಿಳುನಾಡಿನಲ್ಲಿ ಚುನಾವಣೆಯ ಕಾವು ಜೋರಾಗಿಯೇ ಇದೆ. ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇಟ್ರ ಕಳಗಂ (DMK) ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಇದೇ ಹಿನ್ನೆಲೆಯಲ್ಲಿ ಇಂದು ಎರಡೂ ಪಕ್ಷಗಳು ಸೀಟು ಹಂಚಿಕೆಗೆ ಸಹಿ ಹಾಕಿವೆ.
ತಮಿಳುನಾಡಿನಲ್ಲಿ ಏಪ್ರಿಲ್ 6 ರಂದು ಒಟ್ಟು 234 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆಯಾಗಿದ್ದು ಕಾಂಗ್ರೆಸ್ 25 ವಿಧಾನ ಸಭಾ ಕ್ಷೇತ್ರ ಮತ್ತು ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮುಖ್ಯಸ್ಥ ಕೆ.ಎಸ್.ಅಳಗಿರಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಕಳೆದ ವರ್ಷ ಕಾಂಗ್ರೆಸ್ ಸಂಸದ ಹೆಚ್. ವಸಂತಕುಮಾರ್ ಕೋವಿಡ್ ನಿಂದ ನಿಧನರಾಗಿದ್ದು, ಕನ್ಯಾಕುಮಾರಿ ಲೋಕಸಭಾ ಸ್ಥಾನ ಖಾಲಿಯಾಗಿತ್ತು.
Related Articles
ಸೀಟು ಹಂಚಿಕೆ ಒಪ್ಪಂದದ ವೇಳೆ , ಪುದುಚೇರಿ ಮತ್ತು ಗೋವಾದಲ್ಲಿ ಕಾಂಗ್ರೆಸ್ ಉಸ್ತುವಾರಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಿದ್ದರು.