ನಟ- ನಿರ್ದೇಶಕ ರಿಷಭ್ ಶೆಟ್ಟಿ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಜೂನ್ 23ಕ್ಕೆ ಹರಿಕಥೆ ಅಲ್ಲ ಗಿರಿಕಥೆ ಚಿತ್ರ ಬಿಡುಗಡೆಯಾಗುತ್ತಿದ್ದರೆ, ಸೆಪ್ಟೆಂಬರ್ 30ರಂದು ‘ಕಾಂತಾರ’ ಬಿಡುಗಡೆಯಾಗುತ್ತಿದೆ.
ರಿಷಭ್ ಶೆಟ್ಟಿಯವರು ನಟಿಸಿ, ಅವರೇ ಆಕ್ಷನ್ ಕಟ್ ಹೇಳಿರುವ ಚಿತ್ರ ‘ಕಾಂತಾರ’ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.
ದಸರಾ ಹಬ್ಬಕ್ಕೆ ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಿಷಭ್ ಶೆಟ್ಟಿಯವರು, ‘ ಓಟ ಶುರು ಮಾಡುವ ದಿನ ಫಿಕ್ಸಾಯ್ತು.. ಹಬ್ಬಕ್ಕೆ ಬರ್ತಾ ಇದೀವಿ. ಸೆಪ್ಟೆಂಬರ್ 30ರಂದು ಕಾಂತಾರ ಅನಾವರಣ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:“ಗಜಾನನ ಆ್ಯಂಡ್ ಗ್ಯಾಂಗ್” ವಿಮರ್ಶೆ: ಕ್ಯಾಂಪಸ್ನಲ್ಲೊಂದು ಗ್ಯಾಂಗ್ ಸ್ಟೋರಿ
Related Articles
ಬುಡಕಟ್ಟು ಜನರು, ಅವರ ಸಂಪ್ರದಾಯಗಳು ಮತ್ತು ಅರಣ್ಯ ಇಲಾಖೆಯ ನಡುವಿನ ಸಂಘರ್ಷದ ಕಥೆಯನ್ನು ಕಾಂತಾರ ಹೊಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಗೆ ಕರ್ನಾಟಕ ಮಾತ್ರವಲ್ಲದೆ ಅನ್ಯ ರಾಜ್ಯಗಳಲ್ಲೂ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಚಿತ್ರದಲ್ಲಿ ರಿಷಭ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅರವಿಂದ ಕಶ್ಯಪ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಅವರ ಸಂಗೀತ ಚಿತ್ರಕ್ಕಿದೆ.