Advertisement

ಸಿದ್ದರಾಮಯ್ಯ ಬಚ್ಚಿಟ್ಟ ಅಕ್ರಮಗಳ ದಾಖಲೆಗಳನ್ನು ತೆಗೆಯುವ ಕೆಲಸ ಮಾಡುತ್ತಿದ್ದೇವೆ: ನಳಿನ್

12:06 PM Sep 12, 2022 | Team Udayavani |

ಮೈಸೂರು: ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ತನಿಖೆ ಶತಸಿದ್ದ. ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಕೂರಿಸುತ್ತೇವೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗುಡುಗಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅರ್ಕಾವತಿ ರೀ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ‌ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದ್ದರು. ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ. ನಾಲ್ಕು ವರ್ಷದಿಂದ ಅದನ್ನು ತೆಗೆಯುವ ಕೆಲಸ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್ ನಲ್ಲಿ ಕಾಣೆಯಾದ ಸಿದ್ದರಾಮಯ್ಯ ಫೋಟೊ

ವಿರೋಧ ಪಕ್ಷದಲ್ಲಿದ್ದಾಗಲೂ ಸಿದ್ದರಾಮಯ್ಯ ಹಗರಣದ ವಿರುದ್ದ ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಸಮಾಜವಾದಿ ನೈತಿಕತೆ ಇದ್ದ ಸಿಎಂ ಆಗಿದ್ದರೆ ಅವರೇ ತನಿಖೆ ಮಾಡುತ್ತಿದ್ದರು. ಆದರೆ ಅವರು ಮಾಡಲಿಲ್ಲ ಎಲ್ಲವನ್ನೂ ಮುಚ್ಚಿಟ್ಟರು ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next