Advertisement
ಜಿಲ್ಲೆಯ ತಿಪಟೂರು ನಗರದಲ್ಲಿ ಕಳೆದ 9 ದಿನಗಳಿಂದ ಜನರು ಬೀದಿಯಲ್ಲಿ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿ, ಸ್ಥಳೀಯರ ಪರವಾಗಿ ಎನ್‌ಎಚ್ ಎಐ ಅಧಿಕಾರಿಗೆ ಮನವಿ ಮಾಡಿ ಮಾತನಾಡಿದ ಅವರು, ತಿಪಟೂರಿನ ಹಳೇಪಾಳ್ಯದಲ್ಲಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸಿರುವ ಸ್ಥಳೀಯ ನಿವಾಸಿಗಳ ಜತೆ ತುಮಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗೆ ಪತ್ರ ನೀಡಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಬೇಕೆಂದು ತಿಳಿಸಿದ್ದೇನೆ ಎಂದರು.
Related Articles
Advertisement
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಲಾಭದ ದೃಷ್ಟಿಯಲ್ಲಿ ನೋಡದೇ ಜನರ ಭಾವನೆಗಳನ್ನು ಗೌರವಿಸುವ ದೃಷ್ಟಿಯಿಂದ ಕೂಡಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು, ಸ್ಥಳೀಯರು ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಪಕ್ಷಾತೀತವಾಗಿ ಕಳೆದ 9 ದಿನಗಳಿಂದ ನಿರಂತರವಾಗಿ ಧರಣಿ ನಡೆಸುತ್ತಿದ್ದು, ಮಹಿಳೆಯರೂ ಬೀದಿಗೆ ಬಂದು ಕುಳಿತಿದ್ದಾರೆ ಎಂದರು.
ಇದನ್ನೂ ಓದಿ :ಕೇಂದ್ರದಿಂದ ರೈತರ ಕಡೆಗಣನೆ: ವೀರಣ್ಣ
ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ಮಾತನಾಡಿ, ಬೈಪಾಸ್ ನಿರ್ಮಾಣದಿಂದ ಅಣೇಪಾಳ್ಯ ಹಾಗೂ ತಿಪಟೂರು ನಡುವಿನ ಸಂಪರ್ಕವೇ ಕಡಿತವಾಗಲಿದ್ದು, ಸಾಕಷ್ಟು ಜನರ ಬದುಕು ಬೀದಿಗೆ ಬರಲಿದೆ, ಮಹಿಳೆಯರು, ಮಕ್ಕಳು ಬೀದಿಯಲ್ಲಿ ಕುಳಿತು ಕಳೆದೊಂದು ವಾರದಿಂದಲೂ ಧರಣಿ ನಡೆಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಆಗಮಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದರು.
ರೈತ ಕೃಷಿ ಕಾರ್ಮಿಕ ಸಂಘದ ಜಿಲ್ಲಾ ಸಂಚಾಲಕ ಸ್ವಾಮಿ, ಸ್ಥಳೀಯ ನಿವಾಸಿಗಳಾದ ನಾರಾಯಣ, ರಂಜಿತ, ರಂಗಧಾಮಯ್ಯ, ದಿವಾಕರ್, ಗಂಗಾಬಾಯಿ ಇತರರು ಹಾಜರಿದ್ದರು.