Advertisement

ಎಚ್‌ಡಿಕೆ ಹಾರ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ

12:35 AM Dec 31, 2022 | Team Udayavani |

ಬೆಂಗಳೂರು : ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿ ಗಳಿಂದ ಬಗೆ ಬಗೆಯ ಹಾರ ಹಾಕಿಸಿಕೊಂಡ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್, ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರಿದ್ದಾರೆ.

Advertisement

ಎಚ್‌.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಿದ್ದ ತುಮಕೂರಿನ ಯಲ್ಲಾಪುರ ಗ್ರಾಮಕ್ಕೆ ಬಂದ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ತೀರ್ಪುಗಾರ ಮೋಹಿತ್‌ ಕುಮಾರ್‌ ವತ್ಸ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ತೀರ್ಪುಗಾರ ಆರ್‌. ಹರೀಶ್‌ ಎರಡೂ ದಾಖಲೆಗಳ ಪತ್ರಗಳು ಮತ್ತು ಪದಕಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭ ಮಾತನಾಡಿದ ಮೋಹಿತ್‌ ಕುಮಾರ್‌, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿ ಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೇಳೆಗಳನ್ನೇ ಬೃಹತ್‌ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಮೊದಲ ದಾಖಲೆ ಎಂದು ಹೇಳಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಿಸುತ್ತೇನೆ ಎಂದು ತಿಳಿಸಿದರು.
ಈ ಮಧ್ಯೆ ಪಂಚರತ್ನ ಯಾತ್ರೆ 34ನೆ ದಿನಕ್ಕೆ ಕಾಲಿಟ್ಟಿದ್ದು, ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ತುಮಕೂರು ಗ್ರಾಮಾಂತರ ಕ್ಷೇತ್ರವೊಂದರಲ್ಲೇ 30ಕ್ಕೂ ಹೆಚ್ಚು ಬೃಹತ್‌ ಹಾರಗಳನ್ನು ಹಾಕಲಾಗಿದೆ.

ಸೇಬು, ಸೌತೆಕಾಯಿ, ಕೊಬ್ಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್‌ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖೀ ಹಾರ ಗೂಳೂರು ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್‌ ಇಡಿ ಹಾರ ಹಾಕಿ ಸ್ವಾಗತ ಕೋರಲಾಗಿತ್ತು.

Advertisement

ಮಂಡ್ಯದವರನ್ನು ಮೋಸ ಮಾಡಲು ಆಗದು: ಜೆಡಿಎಸ್‌
ಬೆಂಗಳೂರು: ಅಮಿತ್‌ ಶಾ ಅವರು ಮಂಡ್ಯ ಜನರಿಗೆ ಮಂಕುಬೂದಿ ಎರಚಲು ಪ್ರಯತ್ನಿಸಿದ್ದಾರೆ ಎಂದು ಜೆಡಿಎಸ್‌ ಟ್ವೀಟ್‌ ಮೂಲಕ ಆರೋಪಿಸಿದೆ. ಮಂಡ್ಯದವರನ್ನು ಮೋಸ ಮಾಡಲು ಆಗುವುದಿಲ್ಲ ಅಮಿತ್‌ ಶಾ ಜೀ ಎಂದೂ ಜೆಡಿಎಸ್‌ ಹೇಳಿದೆ. ಅಮಿತ್‌ ಶಾ ಮಂಡ್ಯದಲ್ಲಿ ಎಟಿಎಂ ಬಗ್ಗೆ ಮಾತನಾಡಿದ್ದಾರೆ. ಸುಳ್ಳು ಹೇಳಲು ಸಂಕೋಚ ಬೇಡವೇ? ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ಭಾರತೀಯ ಜನತಾ ಪಕ್ಷದ ಎಟಿಎಂ ಆಗಿದೆ. ಇದು ಸುಳ್ಳಾ ಎಂದು ಪ್ರಶ್ನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next