ಮಹಾನಗರ, ಎ. 26: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 2018, 2019ರಲ್ಲಿ ನಡೆದ ವಿವಿಧ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿ ಪತ್ತೆ ಹಚ್ಚಿ ಜಪ್ತಿ ಮಾಡಿದ ಸೊತ್ತುಗಳನ್ನು ನ್ಯಾಯಾಲಯದ ಆದೇಶ ಪಡೆದು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ನಡೆಯಿತು.
ವಾರಸುದಾರರಿಗೆ ಹಸ್ತಾಂತರ:
ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ಸೊತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು.
ಬೆಲೆ ಬಾಳುವ ವಸ್ತುಗಳು:
Advertisement
2018 ಜನವರಿಯಿಂದ 2019 ಮಾರ್ಚ್‌ವರೆಗಿನ 15 ತಿಂಗಳ ಅವಧಿಯಲ್ಲಿ ಮಂಗಳೂರು ಕಮಿಷನರೆಟ್‌ನ 22 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 4,95,00,000 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದು, ಈ ಪೈಕಿ 3,72,00,000 ರೂ. ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.
Related Articles
Advertisement
ಹಿಂದಿರುಗಿಸಿದ ಸೊತ್ತುಗಳಲ್ಲಿ 1.5 ಕೆ.ಜಿ. ಚಿನ್ನಾಭರಣ, 50 ಕ್ಕೂ ಮಿಕ್ಕಿ ದ್ವಿಚಕ್ರ ವಾಹನಗಳು, ಮೊಬೈಲ್ ಫೋನ್‌ಗಳು ಮತ್ತು ನಗದು ಸೇರಿವೆ.
ಆರೋಪಿಗಳನ್ನು ಪತ್ತೆ ಹಚ್ಚಿ ಪ್ರಕರಣಗಳನ್ನು ಭೇದಿಸುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿ ಅವರನ್ನು ಪ್ರಶಂಸಾ ಪತ್ರ ಮತ್ತು ನಗದು ಬಹುಮಾನ ನೀಡಿ ಪೋತ್ಸಾಹಿಸಿದರು. ಕೆಲವು ವರ್ಷಗಳ ಬಳಿಕ ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮವೊಂದು ನಡೆಯಿತು.