Advertisement
ಬುಧವಾರ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸರ್ಕಾರಿನೌಕರರ ಸಂಘದಿಂದ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆ ಒಂದು ವೇದಿಕೆಯಾಗಿದೆ ಎಂದರು. ದಿನನಿತ್ಯ ಕರ್ತವ್ಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಸೇರಿ ಕೂಡಿ ಆಟವಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಪುನಶ್ಚೇತನಗೊಳ್ಳುತ್ತದೆ. ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಂಘವು ಬೇರೆ ಜಿಲ್ಲೆಗಳ ನೌಕರರ ಸಂಘಕ್ಕಿಂತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ನೌಕರರ ಭವನದಲ್ಲಿ ರಿಯಾಯಿತಿ ದರಲ್ಲಿ ದಿನಬಳಕೆ ವಸ್ತುಗಳನ್ನು ನೌಕರರಿಗೆ ದೊರೆಯುವಂತೆ ಮಾಡಿರುವುದು ನೌಕರರಿಗೆ ಅನುಕೂಲವಾಗಿದೆ ಎಂದರು.
Related Articles
Advertisement
ಜಿಪಂ ಉಪಾಧ್ಯಕ್ಷ ಬಿ.ಜೆ. ಸೋಮಶೇಖರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನೌಕರರಿಗಾಗಿ ಆಯೋಜಿಸಿರುವ ಈ ಕ್ರೀಡಾಕೂಟ ಮತ್ತುಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳು ನೌಕರರನ್ನು ಒತ್ತಡದಿಂದ ಮುಕ್ತಗೊಳಿಸಿ ಒಂದೆಡೆ ಸೇರಿ ತಮ್ಮ ನೋವು ನಲಿವುಗಳನ್ನು ಹಂಚಿಕೊಳ್ಳಲು
ಸಹಕಾರಿಯಾಗುವುದಲ್ಲದೆ ತಮ್ಮ ಮನಸ್ಸಿನ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸರ್ಕಾರಿ ನೌಕರರ ಗೌರವಾಧ್ಯಕ್ಷ ಡಿ.ಆರ್. ಓಂಕಾರಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ| ಎಚ್.ಪಿ. ಮಂಜುಳ ಹುಲ್ಲಹಳ್ಳಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಸ್.ಟಿ. ಪೂರ್ಣೇಶ್, ಕಾರ್ಯದರ್ಶಿ ಸತ್ಯನಾರಾಯಣ, ಖಜಾಂಜಿ ಆರ್. ಚಂದ್ರಪ್ಪ, ನಿಕಟಪೂರ್ವ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಇದ್ದರು. ಓದಿ : ಮೊದಲು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿ… : ಶಾ ಗೆ ಮಮತಾ ಚಾಲೆಂಜ್