Advertisement

ಕಲಬುರಗಿ ಮದುವೆ ಮನೆಯಂತಾಗಲಿ

04:04 PM Jan 01, 2020 | Naveen |

ಕಲಬುರಗಿ: ಫೆಬ್ರುವರಿ ತಿಂಗಳಲ್ಲಿ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರವನ್ನು ಮದುವೆ ಮಂಟಪದಂತೆ ಶೃಂಗಾರಗೊಳಿಸಬೇಕೆಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ಹಾಗೂ ಸಮ್ಮೇಳನದ ಅಲಂಕಾರ ಸಮಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ತಿಳಿಸಿದ್ದಾರೆ.

Advertisement

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಲಂಕಾರ ಸಮಿತಿಯ ಮೊದಲನೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮ್ಮೇಳನದ ಹಿನ್ನೆಲೆಯಲ್ಲಿ ನಗರವನ್ನು ವಿಶಿಷ್ಟವಾಗಿ ಅಲಂಕರಿಸಬೇಕು. ಪ್ರಮುಖ ಬೀದಿಗಳಲ್ಲಿ ಕನ್ನಡದ ಧ್ವಜಗಳು ರಾರಾಜಿಸಬೇಕು. ಹಿರಿಯ ಸಾಹಿತಿಗಳ ಭಾವಚಿತ್ರಗಳನ್ನು ಹಾಕಬೇಕು. ಸರ್ಕಾರಿ ಕಟ್ಟಡದ ಮೇಲೆ ಗೋಡೆಬರಹ ಬರೆಯಬೇಕು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next