Advertisement
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದಲ್ಲಿ 2017ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ ಪಕ್ಷ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಲಿಲ್ಲ. ಹಾಗಾಗಿ ಅಂದು ಗೋವಾದಲ್ಲಿ ಅಧಿಕಾರ ಸ್ಥಾಪಿಸುವ ಅವಕಾಶದಿಂದ ವಂಚಿತರಾದೆವು. ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ನಂತರ 2022ರ ವಿಧಾನಸಭೆ ಚುನಾವಣೆವರೆಗೂ ನಾನೊಬ್ಬನೇ ಕಾಂಗ್ರೆಸ್ ಶಾಸಕನಾಗಿದ್ದೆ ಆದರೆ ಸದ್ಯ ಪಕ್ಷ ತನ್ನನ್ನು ನಿರ್ಲಕ್ಷಿಸುತ್ತಿದೆ ಎಂದು ದಿಗಂಬರ ಕಾಮತ್ ಬೇಸರ ಹೊರಹಾಕಿದರು.
Related Articles
ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯ ಅವರ ಪಕ್ಷದ ಆಂತರಿಕ ವಿಚಾರ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತಾನಾವಾಡೆ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಒಡೆಯಬೇಕು ಎಂದಿದ್ದರೆ ಮಿಷನ್ ಕಮಲ ಅರ್ಧಕ್ಕೆ ಬಿಡುವುದಿಲ್ಲ ಎಂದು ಹೇಳಿದ ಅವರು, ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ ಎಂದು ಕಿಡಿಕಾರಿದರು.
Advertisement