ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಜ್ಯದ ಪಶು ಸಂಗೋಪನಾ ಸಚಿವ ಭೇಟಿ ಮಾಡಿ ಚರ್ಚೆ ನಡೆಸಿದರು.
ಉತ್ತರಪ್ರದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅತ್ಯಂತ ಕಠಿಣವಾಗಿ ಜಾರಿಗೊಳಿಸಲಾಗಿದ್ದು ಕರ್ನಾಟಕದಲ್ಲಿಯೂ ಗೋಹತ್ಯೆ ನಿಷೇಧ ತರಲು ಉದ್ದೇಶಿಸಿರುವುದಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಸ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಮತ್ತು ಉತ್ತರಪ್ರದೇಶದ ಪ್ರವಾಸದಲ್ಲಿರುವ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಉತ್ತರಪ್ರದೇಶದ ಭೇಟಿಯ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಿ ಗೋಹತ್ಯೆ ನಿಷೇಧ ಕಾಯ್ದೆಯ ಕುರಿತಾಗಿ ಸುಧೀರ್ಘವಾಗಿ ಚರ್ಚೆ ನಡೆಸಿದರು. ಉತ್ತರಪ್ರದೇಶದಲ್ಲಿ ಗೋಹತ್ಯೆಗೆ ಸಂಬಂಧಪಟ್ಟಂತೆ ಅತ್ಯಂತ ಕಠಿಣ ಕ್ರಮಗಳನ್ನು ಜರುಗಿಸಲಾಗಿದ್ದು ಗೊಹತ್ಯೆ ನಿಷೇಧ ಯಶಸ್ವಿಯಾಗಿ ಜಾರಿಯಲ್ಲಿದೆ ಅಲ್ಲದೇ ಕರ್ನಾಟಕ ಸರ್ಕಾರ ಕೂಡ ಇದೇ ಮಾದರಿಯಲ್ಲಿ ಕಾಯ್ದೆ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆಶಯ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಟಿ ಪ್ರಿಯಾಂಕಾ ಚೋಪ್ರಾ ಅವರ ನೆಚ್ಚಿನ ‘ಬಾಲಿವುಡ್ ಹೀರೋ’ ಯಾರು ಗೊತ್ತಾ ?
ಗೋಹತ್ಯೆ ಕಾಯ್ದೆ ಉತ್ತರಪ್ರದೇಶದಲ್ಲಿ ಅನುಷ್ಠಾನವಾದ ರೀತಿಯ ಬಗ್ಗೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಗೋಶಾಲೆಗಳ ನಿರ್ವಹಣೆ ಮತ್ತು ಗೋವುಗಳ ಆರೈಕೆಯ ಬಗ್ಗೆ ಸಹ ಸಚಿವರು ಮಾಹಿತಿ ಪಡೆದರು.
ಉತ್ತಮ ದೇಶಿ ಗೋವು ತಳಿಗಳ ಅಭಿವೃದ್ಧಿಯ ಕುರಿತು ಉತ್ತರಪ್ರದೇಶ ಪಶುಸಂಗೋಪನೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು ಅತ್ಯುತ್ತಮ ಉತ್ಪಾದನಾ ಸಾಮರ್ಥ್ಯ ಹೊಂದಿದ ಸಾಹಿವಾಲ್ ತಳಿಯ ಎರಡು ಹೋರಿಗಳು ಹಾಗೂ ಹತ್ತು ಹಸುಗಳನ್ನು ಕರ್ನಾಟಕ ರಾಜ್ಯಕ್ಕೆ ಒದಗಿಸಲು ಹಿರಿಯ ಅಧಿಕಾರಿಗಳು ಒಪ್ಪಿಗೆ ಸೂಚಿಸಿರುತ್ತಾರೆ.
ಇದೆ ವೇಳೆ ಉತ್ತರಪ್ರದೇಶದ ರವಣಖೇಡ ಬುಲ್ ಫಾರ್ಮ್ ಹಾಗೂ ಸಾಹಿವಾಲ್ ಅಂಬ್ಯುಲರ್ ಟ್ರಾನ್ಸಫರ್ ಟೆಕ್ನಾಲಜಿ ಕ್ಷೇತ್ರಗಳಿಗೆ ಸಚಿವರು ಭೇಟಿ ನೀಡಿದರು.