ಚಿತ್ರದುರ್ಗ: ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಶ್ರದ್ಧಾ ಭಕ್ತಿ ಹಾಗೂಸಂಭ್ರಮದಿಂದ ಆಚರಿಸಲಾಯಿತು. ಕತ್ತಲಾಗುವುದನ್ನೇ ಕಾಯುತ್ತಿದ್ದ ಪುಟಾಣಿಗಳು ಪಟಾಕಿ ಹಚ್ಚಿ ಸಂಭ್ರಮಿಸಿದರೆ, ಮಹಿಳೆಯರು ಮನೆಯಅಂಗಳದಲ್ಲಿ ಹಣತೆ ಹಚ್ಚಿ ಸಂಭ್ರಮಿಸುತ್ತಿದ್ದರು.
ನಗರದ ಮುಖ್ಯ ರಸ್ತೆಯಲ್ಲಿರುವ ಬಹುತೇಕ ಕಟ್ಟಡಗಳು ವಿದ್ಯುತ್‌ದೀಪಾಲಂಕಾರದಿಂದ ಕಂಗೊಳಿಸಿದವು. ಆಕಾಶ ಬುಟ್ಟಿಗಳು ಮನೆಯಮುಂಭಾಗದಲ್ಲಿ ರಾರಾಜಿಸುತ್ತಿದ್ದವು. ಬಣ್ಣಬಣ್ಣದ ದೀಪದ ಸರಮಾಲೆಗಳುಕಣ್ಣಿಗೆ ಹಬ್ಬ ತಂದಿದ್ದವು. ಬಲಿಪಾಡ್ಯಮಿ ದಿನ ಮನೆಯ ಎದುರುಹೆಂಗಳೆಯರು ರಂಗೋಲಿ ಬಿಡಿಸಿದ್ದರು.
ಪೂಜೆಗೆ ಮಂಟಪ ನಿರ್ಮಿಸಿ ಕಳಸಸ್ಥಾಪಿಸಿದರು. ದ್ವಾರ ಹಾಗೂ ದೇವರ ಬಾಗಿಲುಗಳಿಗೆ ಬಾಳೆಕಂದು, ಮಾವಿನತೋರಣ ಕಟ್ಟಿ, ಪುಷ್ಪಾಲಂಕಾರ ಮಾಡಿದರು.ಲಕ್ಷ್ಮೀ, ಹಿರಿಯರ ಪೂಜೆ ವಿಶೇಷ: ಲಕ್ಷ್ಮೀ ದೇವಿ ಪೂಜೆ, ಕುಲದೇವತೆ ಪೂಜೆ,ಹಿರಿಯರ ಪೂಜೆಗಾಗಿ ನೈವೇದ್ಯ ಸಮರ್ಪಿಸಲು ಮನೆಗಳಲ್ಲಿ ತರಹೇವಾರಿಖಾದ್ಯಗಳನ್ನು ತಯಾರಿಸಲು ಮಧ್ಯಾಹ್ನದಿಂದಲೇ ಮಹಿಳೆಯರು ಮುಂದಾದರು.
ಇನ್ನೂ ಹಿರಿಯರು, ಯುವಕರು ಸಗಣಿಯಲ್ಲಿ ಗಣಪತಿ,ಗೊಲ್ಲಮ್ಮ ದೇವಿಯನ್ನು ನಿರ್ಮಿಸಿ, ಕಾಚಿಕಡ್ಡಿ, ಬ್ರಹ್ಮದಂಡೆ ಗಿಡ, ತಂಗಟೆಹೂಗಳೊಂದಿಗೆ ಮನೆಯಲ್ಲಿರುವ ಬಾಗಿಲುಗಳ ಎರಡೂ ಬದಿಗಳಲ್ಲಿಟ್ಟುಪೂಜೆಗೆ ಸಿದ್ಧತೆ ಮಾಡಿಕೊಂಡರು. ಸಂಜೆಯಾಗುತ್ತಿದ್ದಂತೆ ಹೂ, ಹಣ್ಣುಸಮರ್ಪಣೆಯೊಂದಿಗೆ ಅನೇಕರ ಮನೆಗಳಲ್ಲಿ ಪೂಜೆಗಳು ನೆರವೇರಿದವು.
ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ: ಭಕ್ತಿ, ಭಾವದಿಂದ ಸಮ್ಮಿಳಿತಗೊಂಡಿದ್ದಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗ್ರಾಮೀಣ ಪ್ರದೇಶದಲ್ಲಿಗೋವುಗಳಿಗೆ ಸ್ನಾನ ಮಾಡಿಸಿ ವಿಶೇಷ ಅಲಂಕಾರ ಮಾಡಲಾಯಿತು.ಗೋಪೂಜೆ ನೆರವೇರಿಸಿ ಹಬ್ಬ ಆಚರಿಸಲಾಯಿತು. ಅಲ್ಲದೆ, ಕೊಟ್ಟಿಗೆಯಿಂದಮನೆಗೆ ಕರೆತಂದು ಪೂಜೆ ಸಲ್ಲಿಸಲಾಯಿತು. ದೀಪಾವಳಿ ಅಂಗವಾಗಿ ಜಿಲ್ಲೆಯಹಲವು ದೇಗುಲಗಳಲ್ಲೂ ವಿಶೇಷ ಪೂಜೆ ನೆರವೇರಿತು.