Advertisement

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

05:06 PM Apr 14, 2019 | Team Udayavani |

ರಾಯಚೂರು: ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮಂಜೂರಾದ ಮನೆಗಳ ನಿರ್ಮಾಣದಲ್ಲಿ ಸಾಕಷ್ಟು ಅಕ್ರಮ ಎಸಗಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸರ್ಕಾರದಿಂದ ಪ್ರತಿ ವರ್ಷ ಕೊಳಚೆ ಪ್ರದೇಶಗಳ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಆಗುತ್ತಿದೆ. ಆದರೆ, ಅಧಿ ಕಾರಿಗಳು ಅದರಲ್ಲೂ ಸಾಕಷ್ಟು ಅಕ್ರಮ ಎಸಗಿ ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಶ್ಯ ಧೋರಣೆ ತಾಳಿದ್ದಾರೆ. ಕೊಳಚೆ ಪ್ರದೇಶಗಳ ಅರ್ಹರಿಗೆ ಮನೆ ನಿರ್ಮಿಸದ ಕಾರಣ ಗುಡಿಸಲಲ್ಲಿ ವಾಸಿಸುತ್ತಿದ್ದಾರೆ ಎಂದು ದೂರಿದರು.

ಸರ್ವರಿಗೂ ಸೂರು ಯೋಜನೆಯಂತೆ ಆಯ್ಕೆಯಾದ ಎಲ್ಲ ಫಲಾನುಭವಿಗಳಿಗೂ ನಿಗದಿಯಾದ ಮೊತ್ತ ನೀಡಬೇಕು. ಸರ್ಕಾರದ ನಿಯಮದನ್ವಯ ಮನೆಗಳನ್ನು ನಿರ್ಮಿಸುವಲ್ಲಿ ವಿಫಲರಾದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇಲ್ಲಿ ನಡೆದ ಅವ್ಯವಹಾರದ ಸೂಕ್ತ ತನಿಖೆ ನಡೆಸಬೇಕು. ಗುತ್ತಿಗೆದಾರರ ಬೆಂಬಲಿಗರು ಫಲಾನುಭವಿಗಳಿಗೆ ಬೆದರಿಕೆ ಹಾಕುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಉನ್ನತ ಮಟ್ಟದ ಸಮಿತಿ ಸದಸ್ಯ ಕುಮಾರ ಸಮತಳ, ಎನ್‌. ಹರ್ಷವರ್ಧನ ವಕೀಲ, ಶಿವರಾಜ ಗಂಟೆ, ಎಂ.ಆಂಜನೇಯ ಕುರುಬದೊಡ್ಡಿ, ಶ್ರೀನಿವಾಸ ಕಲವಲದೊಡ್ಡಿ, ಚಂದ್ರಶೇಖರ ಭಂಡಾರಿ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next