Advertisement
ವಾಹನ ನಿಷೇಧದ ಬಗ್ಗೆ ಆದೇಶ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ. ಕಳೆದ ಮಳೆಗಾಲದಲ್ಲಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಸಂಚಾರ ದುಸ್ತರವಾಗಿತ್ತು.ಈ ಹಿನ್ನಲೆಯಲ್ಲಿ ಗುಡ್ಡ ಕುಸಿತಕ್ಕೆ ಶಾಶ್ವತ ಪರಿಹಾರ ಮತ್ತು ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವಗಿ ಸಲುವಾಗಿ ಒಂದು ತಿಂಗಳ ಕಾಲ ದುರಸ್ತಿ ಕಾರ್ಯ ನಡೆಯಲಿದೆ.
ಭಾರಿ ವಾಹನಗಳು: ರಾಜಹಂಸ, ಐರಾವತ ಬಸ್ಸುಗಳು ಮತ್ತು ಖಾಸಗಿ ಲಕ್ಷುರಿ ಬಸ್ಸುಗಳು ಮತ್ತು ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನಗಳು ಎಪ್ರಿಲ್ 30ರವರೆಗೆ ತೀರ್ಥಹಳ್ಳಿ- ಮಾಸ್ತಿಕಟ್ಟೆ- ಹೊಸಂಗಡಿ- ಸಿದ್ದಾಪುರ- ಕುಂದಾಪುರ- ಉಡುಪಿ ದಾರಿಯಲ್ಲಿ ಸಂಚಾರ ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಯವರು ಅಧಿಸೂಚನೆ ಹೊರಡಿಸಿದ್ದಾರೆ.
Related Articles
Advertisement
ಮುಂದೂಡಿಕೆಯಾಗಿದ್ದ ದುರಸ್ತಿ ಕಾರ್ಯ: ಈ ಹಿಂದೆ ದುರಸ್ತಿ ಕಾರ್ಯ ನಡೆಸಲು ಮಾರ್ಚ್ ಒಂದರಿಂದ 31ರವರಗೆ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯವಾದ್ದರಿಂದ ಈ ಆದೇಶವನ್ನು ಮುಂದೂಡಲಾಗಿತ್ತು.