Advertisement

ದ್ವಿಪಥ ಹೆದ್ದಾರಿ ಉನ್ನತೀಕರಣಕ್ಕೆ 87 ಕೋಟಿ ರೂ. ಅನುಮೋದನೆ

05:44 PM Feb 06, 2021 | Team Udayavani |

ಚಿಕ್ಕಮಗಳೂರು: ಶೃಂಗೇರಿ ಪಟ್ಟಣದ ಮದ್ಯ ಹಾದು ಹೋಗಿರುವ 2ಪಥದ 169 ರಾಷ್ಟ್ರೀಯ ಹೆದ್ದಾರಿಯನ್ನು ಉನ್ನತೀಕರಿಸಿ 4 ಪಥದ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 87.19 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Advertisement

ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ 169ರ 5 ಕಿ.ಮೀ.ವರೆಗೂ 4 ಪಥ ನಿರ್ಮಾಣ
ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಪ್ರತೀ ಕಿ.ಮೀ.ಗೆ 17.44 ಕೋಟಿ ರೂ.ನಂತೆ 87.18 ಕೋಟಿ ರೂ. ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. 4 ಪಥದ ರಸ್ತೆ ನಿರ್ಮಾಣ ಬಹಳ ವರ್ಷಗಳ ಬೇಡಿಕೆಯಾಗಿದ್ದು,
ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಓದಿ : ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

 

Advertisement

Udayavani is now on Telegram. Click here to join our channel and stay updated with the latest news.

Next