ಚಿಕ್ಕಮಗಳೂರು: ನಗರಸಭೆ ಚುನಾವಣೆ ನಡೆದು 8 ವರ್ಷ ಕಳೆದಿದೆ. ಜನಪ್ರತಿನಿಧಿ ಮಂಡಳಿ ಇಲ್ಲದೆ 2 ವರ್ಷ ಕಳೆದಿದೆ. ನಗರಸಭೆಯಲ್ಲಿ ಜನಪ್ರತಿನಿಧಿ ಆಡಳಿತ ಮಂಡಳಿ ಯಿಲ್ಲದೇ ನಗರದದ್ಯಾಂತ ಕಳಪೆ ಕಾಮಗಾರಿ ನಡೆಯುತ್ತಿದೆ. ಕೆಲ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿ ಕುಂಠಿತಗೊಂಡಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯಲ್ಲಿ ಜನಪ್ರತಿಧಿಗಳಿಲ್ಲದೇ ಅ ಧಿಕಾರಿಗಳು ಮತ್ತು ಸಿಬ್ಬಂದಿಗಳದ್ದೇ ಆಟವಾಗಿದೆ. ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. 8 ವರ್ಷಗಳಿಂದ ಚುನಾವಣೆ ನಡೆಸದಿರುವ ಕೀರ್ತಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಅವರಿಗೆ ಸಲ್ಲಬೇಕು ಎಂದರು.
ನಗರಸಭೆಯಲ್ಲಿ ಜನಪ್ರತಿನಿ ಧಿಗಳಿದ್ದರೆ ಕಾಮಗಾರಿ ನಡೆಸಲು ಅವರ ಅನುಮತಿ ಪಡೆಯಬೇಕು. ಜನಪ್ರತಿನಿಧಿಗಳಿದ್ದರೆ ಕಾಮಗಾರಿ ಹೆಸರಿನಲ್ಲಿ ಲೂಟಿ ಹೊಡೆಯಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ನಗರಸಭೆ ಚುನಾವಣೆ ನಡೆಸಲು ಬಿಜೆಪಿಯವರಿಗೆ ಆಸಕ್ತಿ ಇಲ್ಲದಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಶಾಲಾ ಮಕ್ಕಳಿಗೆ ಉಚಿತ ಮಾಸ್ಕ್ ವಿತರಣೆ
ನಗರದಲ್ಲಿ 36 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಅಪೂರ್ಣವಾಗಿವೆ. ಮತ್ತು ಕಳಪೆಯಿಂದ ಕೂಡಿವೆ. ಜಿಲ್ಲಾ ಧಿಕಾರಿ ಕಚೇರಿ, ಐಜಿ.ರಸ್ತೆ, ಬೇಲೂರು ರಸ್ತೆ ಹಾಗೂ ನಗರದಲ್ಲಿ ನಡೆಯುತ್ತಿರುವ ಬಾಕ್ಸ್ ಚರಂಡಿ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿವೆ. ಇದನ್ನು ನೋಡಿ ನಗರಸಭೆ ಆಡಳಿತಾಧಿ ಕಾರಿಯಾಗಿರುವ ಜಿಲ್ಲಾ ಧಿಕಾರಿಗಳು ಸುಮ್ಮನಿರುವುದು ನೋಡಿದರೆ ಅನುಮಾನಕ್ಕೆ ಆಸ್ಪದವಾಗಿದೆ ಎಂದರು. ಇನ್ನು ನಗರದಲ್ಲಿ ನಡೆಯುತ್ತಿರುವ ಯುಜಿಡಿ, ಅಮೃತ್ ಯೋಜನೆ, ವಾಜಪೇಯಿ ಬಡಾವಣೆ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು, ಶಾಸಕರು ಇದರ ಬಗ್ಗೆ ಆಸಕ್ತಿ ವಹಿಸಿ ತನಿಖೆಗೆ ಆದೇಶ ನೀಡಬೇಕು ಮತ್ತು ನಗರಸಭೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರಸಭೆ ಮಾಜಿ ಸದಸ್ಯೆ ಸುರೇಖಾ ಸಂಪತ್‌ರಾಜ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ರಸೂಲ್‌ಖಾನ್, ರೂಬೆನ್ ಮೊಸೆಸ್ ಇದ್ದರು.