Advertisement

ನೀತಿ ಸಂಹಿತೆ ಉಲ್ಲಂಘನೆ: ಸಿದ್ದು, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

10:57 PM Mar 30, 2023 | Team Udayavani |

ಬೆಂಗಳೂರು: ನೀತಿ ಸಂಹಿತೆ ಉಲ್ಲಂಘನೆ ಹಾಗೂ ಪಕ್ಷದ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ದೂರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

Advertisement

ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ಬಿಜೆಪಿ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಗುರುವಾರ ಭೇಟಿಯಾಗಿ ದೂರು ಸಲ್ಲಿಸಿದೆ.

ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಚುನಾವಣ ಪ್ರಚಾರದ ವೇಳೆ ಮಾರ್ಚ್‌ 29ರ ಸಂಜೆ 4.15ರ ಸುಮಾರಿಗೆ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1 ಸಾವಿರ ರೂ. ನೀಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಜತೆಗೆ ಚುನಾವಣ ಆಯೋಗದ ವಿಶ್ವಾಸಾರ್ಹತೆಗೆ ಚ್ಯುತಿ ಬರುವಂತೆ ಸಿದ್ದರಾಮಯ್ಯನವರು ಮಾತನಾಡಿ¨ªಾಗಿ ಇನ್ನೊಂದು ದೂರು ನೀಡಲಾಗಿದೆ. ಕಾಂಗ್ರೆಸ್‌ ಕಟ್ಟಿಹಾಕುವುದಕ್ಕಾಗಿಯೇ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳನ್ನು ಚುನಾವಣ ಆಯೋಗ ನಿಯೋಜಿಸಿದೆ ಎಂದು ಹೇಳಿದ್ದು, ಇದು ಸಂವಿಧಾನಾತ್ಮಕ ಸಂಸ್ಥೆಯ ವಿರುದ್ಧ ಆಧಾರರಹಿತ ಆರೋಪವಾಗಿದೆ. ಇದರಿಂದ ಜನರ ಮನಸ್ಸಿನಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಅಭಿಪ್ರಾಯ ಮೂಡಿಸುವಂತಿದೆ. ಆದ್ದರಿಂದ ಸಿದ್ದರಾಮಯ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಲಾಗಿದೆ.

ಸುರ್ಜೇವಾಲಾ ವಿರುದ್ಧ ದೂರು
ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿ¨ªಾರೆ. ಅವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕರ್ನಾಟಕ ಚುನಾವಣೆ ಸಂಬಂಧ ನೀಡಿದ ಹೇಳಿಕೆಯಲ್ಲಿ “ದಿ ಬಿಜೆಪಿ 40 ಪರ್ಸೆಂಟ್‌ ಕಮಿಷನ್‌ ಸರಕಾರ’ ಎಂದು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿ ಮತದಾರರಲ್ಲಿ ತಪ್ಪು ಮಾಹಿತಿ ನೀಡಿ, ಚುನಾವಣ ನೀತಿಸಂಹಿತೆ ಉಲ್ಲಂಘನೆ ಮಾಡಿ¨ªಾರೆ ಎಂದು ದೂರಿನಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next