Advertisement

ಮಡಿವಾಳ ಸಮುದಾಯದಿಂದ ಮಾಚಿ ದೇವರ ಸ್ಮರಣೆ

02:27 PM Feb 02, 2021 | Team Udayavani |

ಬಳ್ಳಾರಿ: ನಗರದ ಅಂದ್ರಾಳ್‌ ರಸ್ತೆಯ ಹಳ್ಳದ ಪ್ರದೇಶದಲ್ಲಿನ ದೋಬಿಘಾಟ್‌ ನಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು. ಮಡಿವಾಳ ಸಮುದಾಯದಿಂದ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡ ಮಲ್ಲೇಶ್‌ ಅವರು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.

Advertisement

ಬಳಿಕ ಮಾತನಾಡಿದ ಅವರು, ಎಲ್ಲೆಡೆ ಕೋವಿಡ್‌ ಸೋಂಕು ಆವರಿಸಿದೆ. ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಆಚರಿಸಬೇಕಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಗಿದೆ. ಸಮುದಾಯದ ಪ್ರತಿಯೊಬ್ಬ ಯುವಕರು ಮಡಿವಾಳ ಮಾಚಿದೇವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ಶಿಕ್ಷಣ ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಸಮುದಾಯದ
ಅಭಿವೃದ್ಧಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಸಮುದಾಯದ ಜನರು ಸದುಪಯೋ ಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯಕುಮಾರ್‌, ಕೌಲ್‌ಬಜಾರ್‌ ಮಂಜುನಾಥ್‌, ರಮೇಶ್‌, ಶೇಖರ್‌, ವೀರೇಶ್‌, ದುರುಗಪ್ಪ ಸೇರಿದಂತೆ ಹಲವರು ಇದ್ದರು.

ಓದಿ : ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ

Advertisement

Udayavani is now on Telegram. Click here to join our channel and stay updated with the latest news.

Next