Advertisement

ಮೈತ್ರಿ ಅಭ್ಯರ್ಥಿ ಪ್ರಮೋದ್‌ ಗೆಲುವು ನಿಶ್ಚಿತ

03:07 PM Apr 13, 2019 | |

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ರವರಿಗೆ ಜಿಲ್ಲೆಯಲ್ಲಿ ಅಭೂತ ಪೂರ್ವ ಬೆಂಬಲ ದೊರೆಯುತ್ತಿದ್ದು, ಅವರ ಗೆಲುವು ಖಚಿತ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಡಾ| ಡಿ.ಎಲ್‌. ವಿಜಯಕುಮಾರ್‌ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್‌ ಮಧ್ವರಾಜ್‌ ಅವರು ಉಡುಪಿ ಕ್ಷೇತ್ರದ ಶಾಸಕರಾಗಿ ಹಾಗೂ ಕ್ರೀಡಾ ಸಚಿವರಾಗಿ
ರಾಜ್ಯದಲ್ಲಿ ಮಾಡಿದ ಉತ್ತಮ ಕೆಲಸಗಳಿಂದಾಗಿ ಇಂದು ಕ್ಷೇತ್ರದಾದ್ಯಂತ ಉತ್ತಮ ಬೆಂಬಲ ದೊರೆಯುತ್ತಿದೆ. ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಸಿಪಿಐ
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸುತ್ತಿರುವುದರಿಂದಾಗಿ ಮೈತ್ರಿ ಅಭ್ಯರ್ಥಿಗೆ ಮತಷ್ಟು ಬಲ ಬಂದಿದೆ ಎಂದರು.

ಏ. 16ರಂದು ಚಿಕ್ಕಮಗಳೂರು ನಗರದಲ್ಲಿ ಮೈತ್ರಿ ಪಕ್ಷದಿಂದ ಬೃಹತ್‌ ರೋಡ್‌ಶೋ ಹಾಗೂ ಬಹಿರಂಗ ಸಭೆ ನಡೆಯಲಿದ್ದು, ಜೆಡಿಎಸ್‌ ರಾಷ್ಟ್ರೀಯ
ಅಧ್ಯಕ್ಷ ಹೆಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕಳೆದ ಐದು ವರ್ಷಗಳ ಕಾಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಪ್ರತಿನಿಧಿಸಿದ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಪರಿಣಾಮ ಜಿಲ್ಲೆಯ ಜನತೆಯ ವಿರೋಧ ಎದುರಿಸುತ್ತಿದ್ದಾರೆ. ಸ್ವಪಕ್ಷಿಯರೇ ಗೋಬ್ಯಾಕ್‌ ಶೋಭಾ ಎನ್ನುತ್ತಿದ್ದಾರೆ. ಭೇಟಿ ನೀಡಿದ
ಗ್ರಾಮಗಳಲ್ಲಿ ಮುತ್ತಿಗೆ ಹಾಕಿ ನಮ್ಮ ಗ್ರಾಮಕ್ಕೆ ಬರಬೇಡಿ ಎನ್ನುತ್ತಿದ್ದಾರೆ ಎಂದು ತಿಳಿಸಿದರು.

ಸಂಸದ ಶೋಭಾ ಕರಂದ್ಲಾಜೆ ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಯಾವುದೇ ಹೊಸ ಯೋಜನೆ ತರುವಲ್ಲಿ ವಿಫಲರಾಗಿದ್ದಾರೆ. ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೇ ಸಚಿವರಾಗಿದ್ದಾಗ ಕಡೂರು-ಚಿಕ್ಕಮಗಳೂರು ರೈಲ್ವೆ ಯೋಜನೆಗೆ ಚಾಲನೆ ನೀಡಿದರು. ಆದರೆ
ಶೋಭಾ ಕರಂದ್ಲಾಜೆ ರೈಲ್ವೇ ಯೋಜನೆಯನ್ನು ಸಕಲೇಶಪುರಕ್ಕೆ ವಿಸ್ತರಿಸುವ ಬಗ್ಗೆ ಹಾಗೂ ಬೆಂಗಳೂರಿನಿಂದ-ಚಿಕ್ಕಮಗಳೂರಿಗೆ ಎಕ್ಸ್‌ಪ್ರೆಸ್‌ ರೈಲು ತರುವಲ್ಲಿ ನಿರಾಸಕ್ತಿ ವಹಿಸಿದರು. ಜನರ ಬೇಡಿಕೆಗೂ ಸ್ಪಂದಿಸಲಿಲ್ಲ ಎಂದು ಆರೋಪಿಸಿದರು.

Advertisement

ಮಲೆನಾಡಿನ ಜನರಿಗೆ ತೂಗುಕತ್ತಿಯಾಗಿ ಮಾರ್ಪಟ್ಟಿರುವ ಕಸ್ತೂರಿ ರಂಗನ್‌ ವರದಿ ಬಗ್ಗೆ ಸಂಸದೆ ಶೋಭಾ ಮಾತನಾಡಲಿಲ್ಲ, ಜಿಲ್ಲೆಯ ಜನರೊಂದಿಗೆ, ಜನಪ್ರತಿನಿಧಿಗಳೊಂದಿದೆ ಹಾಗೂ ಸರ್ಕಾರದ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದರು.

ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಲೋಕಸಭೆ ಒಳಗೆ ಹಾಗೂ ಹೊರಗೆ ಜಿಲ್ಲೆಯಿಂದ ಪ್ರತಿನಿಧಿಸಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಿದ್ದಾರೆ ಎಂದು ತಿಳಿಸಿದರು.

ಕಡೂರು ತಾಲೂಕಿನ ಜಿಪಂ ಸದಸ್ಯ ಮಹೇಶ್‌ ಒಡೆಯರ್‌ ಅವರು ಕಾಂಗ್ರೆಸ್‌ ಚಿಹ್ನೆಯಡಿ ಕಣಕ್ಕಿಳಿದು, ಗೆದ್ದ ನಂತರ ಈಗ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಪಕ್ಷದ ಕಾನೂನು ವಿಭಾಗದವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಿಪಿಐ ಮುಖಂಡ ಎಚ್‌. ಎಂ. ರೇಣುಕಾರಾಧ್ಯ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ವಕ್ತಾರ ಶಿವಾನಚಿದ ಸ್ವಾಮಿ ಉಪಸ್ಥಿತರಿದ್ದರು.

ಜಿಲ್ಲೆಯ ಬಯಲುಸೀಮೆ ಭಾಗದ ನೀರಾವರಿ ಯೋಜನೆಗಳತ್ತ ಸಂಸದರು
ಗಮನ ಹರಿಸಲೇ ಇಲ್ಲ. ಜಿಲ್ಲೆಯ ಅಡಿಕೆ, ಕಾಫಿ, ಕಾಳು ಮೆಣಸು
ತೆಂಗುಧಾರಣೆಯಿಲ್ಲದೆ ಹಾಗೂ ಬರಗಾಲಕ್ಕೆ ಬೆಳೆಗಾರರು ದುಸ್ಥಿತಿ
ಎದುರಿಸುತ್ತಿದ್ದರು ಎಂದು ಕೂಡ ಸಂಸದರು ಬೆಳೆಗಾರರ ಪರ ಧ್ವನಿ
ಎತ್ತಲೇ ಇಲ್ಲ. ಈ ಎಲ್ಲ ಕಾರಣಗಳಿಂದ ಜಿಲ್ಲೆಯ ಜನತೆ ಶೋಭಾ ಕರಂದ್ಲಾಜೆ ಅವರನ್ನು ವಿರೋಧಿಸುತ್ತಿದ್ದು, ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ.
ಡಾ| ಡಿ.ಎಲ್‌. ವಿಜಯಕುಮಾರ್‌,
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next