Advertisement

ಶಶಿ ತರೂರ್‌ಗೆ ಸಮನ್ಸ್‌

06:41 AM Apr 28, 2019 | Team Udayavani |

ಹೊಸದಿಲ್ಲಿ: ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿ ವಿವಾದಕ್ಕೀ ಡಾಗಿದ್ದ ಕಾಂಗ್ರೆಸ್‌ ಸಂಸದ ಶಶಿ ತರೂರ್‌ಗೆ ಈಗ ದಿಲ್ಲಿಯ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಆರೆಸ್ಸೆಸ್‌ ನಾಯಕರೊಬ್ಬರ ಜತೆ ಮಾತನಾ ಡುತ್ತಾ ತರೂರ್‌ ಅವರು, ಪ್ರಧಾನಿ ಮೋದಿ ಯವರನ್ನು ಶಿವಲಿಂಗದ ಮೇಲೆ ಕುಳಿತ ಚೇಳು ಇದ್ದಂತೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದೆ ಎಂದು ಆರೋಪಿಸಿ ಬಿಜೆಪಿ ನಾಯಕ ರಾಜ್‌ ಬಬ್ಬರ್‌ ಕೋರ್ಟ್‌ ಮೆಟ್ಟಿಲೇರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next