Advertisement

ಸೋಲಿನ ಭೀತಿಯಿಂದ ಖರ್ಗೆ ಟೆಂಪಲ್ ರನ್‌

02:11 PM Apr 22, 2019 | Team Udayavani |

ಬೆಳಗಾವಿ: ಮಲ್ಲಿಕಾರ್ಜುನ ಖರ್ಗೆ ಸೋಲಿನ ಭೀತಿಯಿಂದ ಇದೇ ಮೊದಲ ಬಾರಿಗೆ ಟೆಂಪಲ್ ರನ್‌ ಮಾಡುತ್ತಿದ್ದಾರೆ. ಬಿಜೆಪಿಯ ಉಮೇಶ ಜಾಧವ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

Advertisement

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿ ಆಗಲೆಂದು ಎಲ್ಲ ವರ್ಗದ ಜನರು ಬಯಸಿದ್ದಾರೆ. ದೇಶದಲ್ಲಿ ನಡೆದಿರುವ ಮಹಾಘಟಬಂಧನ ಎಲ್ಲಿ ಇದೆ ಎಂಬುದೇ ಗೊತ್ತಿಲ್ಲ. ಇವರು ಮೋದಿಯ ಆಡಳಿತ ನೋಡಿ ಈಗ ಒಂದಾಗಿದ್ದಾರೆ. ಆ ಗುಂಪಿನಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲ ಎಂದರು.

ಕರ್ನಾಟಕ ರಾಜ್ಯದಲ್ಲಿ ಎರಡಕ್ಕಿಂತ ಹೆಚ್ಚು ಸೀಟುಗಳಿದ್ದರೂ ನಾವು ಗೆಲ್ಲುತ್ತಿದ್ದೇವು. ಸದ್ಯ ಎರಡಂಕಿಯಷ್ಟು ಸ್ಥಾನಗಳನ್ನು ಗೆಲ್ಲುತ್ತೇವೆ. 22ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಒಂದಂಕಿಯಲ್ಲಿ ಇರುವ ಕಾಂಗ್ರೆಸ್‌ ಹೀನಾಯವಾಗಿ ಸೋಲು ಅನುಭವಿಸಲಿದೆ. ಬಿಜೆಪಿ ಪರವಾಗಿ ಸಕಾರಾತ್ಮಕ ಸ್ಪಂದನೆ ಸಿಗುತ್ತಿದೆ. ರಾಜ್ಯದಲ್ಲಿ ಮೊದಲನೆಯ ಹಂತದ ಚುನಾವಣೆಯಲ್ಲಿ 9 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ. ಎರಡನೇ ಹಂತದಲ್ಲಿ 13 ಸೀಟುಗಳನ್ನು ಗೆಲ್ಲಲಾಗುವುದು ಎಂದರು.

ನರೇಂದ್ರ ಮೋದಿ ಬಗ್ಗೆ ಇಡೀ ದೇಶದಲ್ಲಿ ಗೌರವ ಭಾವನೆ ಹೆಚ್ಚಾಗುತ್ತಿದೆ. ಕಳೆದ ಸಲಕ್ಕಿಂತಲೂ ಈ ಬಾರಿ ಬಿಜೆಪಿ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ವಿರೋಧ ಪಕ್ಷದವರು ಸುಳ್ಳು ಭಾಷಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮೋದಿ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಸಂಸ್ಕೃತಿ ಇಲ್ಲದ ಸಿದ್ದರಾಮಯ್ಯ ಚೋರರು ಎಂದು ಟೀಕಿಸಿದರು.

ಸಂಸದ ಸುರೇಶ ಅಂಗಡಿ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ಭಾರತ ಗೆಲ್ಲಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಬಿಜೆಪಿ ಪರ ಮತ ಚಲಾಯಿಸುವ ಮೂಲಕ ನನ್ನನ್ನು ಮತ್ತೂಮ್ಮೆ ಸಂಸದರನ್ನಾಗಿ ಆಯ್ಕೆ ಮಾಡಿ ಮೋದಿ ಪ್ರಧಾನಿಯಾಗಲು ಸಹಕರಿಸಬೇಕು ಎಂದು ಮನವಿ ಮಾಡಿದರು.

Advertisement

ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ಮುಖಂಡರಾದ ಎಂ.ಬಿ. ಜಿರಲಿ, ರಾಜು ಚಿಕ್ಕನಗೌಡರ, ಸುದ್ದಿಗೋಷ್ಠಿಯಲ್ಲಿದ್ದರು.

ಬಿಜೆಪಿಗೆ 22ಕ್ಕೂ ಹೆಚ್ಚು ಸ್ಥಾನ: ಜಗದೀಶ

ರಾಮದುರ್ಗ: ದೇಶ ಹಾಗೂ ರಾಜ್ಯದಲ್ಲಿ ಮೋದಿ ಅಲೆ ಜೋರಾಗಿದ್ದು, ಮತ್ತೇ ನರೇಂದ್ರ ಮೋದಿಯವರೆ ಪ್ರಧಾನಿಯಾಗಬೇಕೆಂಬ ಇಚ್ಚೆಯನ್ನು ದೇಶದ ಜನತೆ ಹೊಂದಿದ್ದು, ದೇಶದಲ್ಲಿ 300ಕ್ಕೂ ಅಧಿಕ ಹಾಗೂ ರಾಜ್ಯದಲ್ಲಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆದುಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿದ್ದು, ರಾಜ್ಯದ ತುಂಬಾ ಮೋದಿ ಅಲೆ ಹೆಚ್ಚಾಗಿದೆ.
ಪ್ರಧಾನಮಂತ್ರಿ ಮೋದಿಯವರ ಸಮರ್ಥ ನಾಯಕತ್ವದ ಪರಿಣಾಮ ರಾಜ್ಯದ ಎರಡನೇ ಹಂತದಲ್ಲಿ ನಡೆಯುವ ಮುಂಬೈ ಮತ್ತು ಹೈದ್ರಾಬಾದ ಕರ್ನಾಟಕದ 14 ಸ್ಥಾನಗಳಲ್ಲಿ 12 ಸ್ಥಾನಗಳು ಬಿಜೆಪಿ ಪಾಲಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿರ್ದಿಷ್ಟ ಹೋರಾಟದ ಲಕ್ಷಣಗಳಿಲ್ಲದ ಮಹಾಘಟಬಂಧನ ಈ ಚುನಾವಣೆಯಲ್ಲಿ ಹೆಸರು ಹೇಳದಂತೆ ಸೋಲುವುದು ಖಚಿತ. ಅಲ್ಲದೇ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಸುರೇಶ ಅಂಗಡಿ ಮತ್ತು ಅಣ್ಣಾಸಾಹೇಬ ಜೊಲ್ಲೆ ಗೆಲುವು ಖಚಿತ ಎಂದು ಹೇಳಿದರು. ಶಾಸಕ ಮಹಾದೇವಪ್ಪ ಯಾದವಾಡ, ಜಿ.ಜಿ. ಪಾಟೀಲ ಇತರರಿದ್ದರು.
Advertisement

Udayavani is now on Telegram. Click here to join our channel and stay updated with the latest news.

Next