ಬಳ್ಳಾರಿ: ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ವಿಜಯ ಮಹಿಳಾ ಸಂಘ ಕೌಲ್ ಬಜಾರ್ ಸಹಯೋಗದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ| ಎಸ್.ವೈ. ತಿಮ್ಮಾರೆಡ್ಡಿಯವರು ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಹೆಣ್ಣುಮಕ್ಕಳ ಪಾತ್ರ ತುಂಬಾ ಮುಖ್ಯ. ಎಲ್ಲ ಹೆಣ್ಣುಮಕ್ಕಳು ತಪ್ಪದೇ ಶಿಕ್ಷಣವನ್ನು ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆದು ನಿಮ್ಮ ಜೀವನದಲ್ಲಿ ಏನಾದರೂ ಸಾಧಿ ಸಿ ಎಂದು
ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಚ್.ಸಿ. ರಾಘವೇಂದ್ರ ಅವರು ಮಾತನಾಡಿ, ವರದಕ್ಷಿಣೆ, ಬಾಲ್ಯವಿವಾಹ, ಹೆಣ್ಣುಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ. ಇಂಥ ಯಾವುದೇ ದೌರ್ಜನ್ಯಗಳು ನಡೆದದ್ದು ನಿಮ್ಮ ಗಮನಕ್ಕೆ ಬಂದ ಕೂಡಲೇ ರಕ್ಷಣಾ ಆಯೋಗಕ್ಕೆ ತಿಳಿಸಿ ಮುಂದೆ ಇಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲರು ಸಹಕರಿಸಿ ಎಂದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾ ಧಿಕಾರಿ ಮಾಂಟು ಪಾತರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಎ. ಮೌನೇಶ, ವಿಜಯ ಮಹಿಳಾ ಸಂಘ ಕೌಲ್ ಬಜಾರ್ ಅಧ್ಯಕ್ಷರಾದ ವಿಜಯಮ್ಮ,
ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥರಾದ ವಿಜೇಂದ್ರ ಕೆ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶಶಿಕಿರಣ್ ಗುಡೇಕೋಟೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಂಯೋಜಕರಾದ ಸೋಮಶೇಖರ್ ಕಲ್ಡಳ್ಳಿ, ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ಇತರರು ಇದ್ದರು.
ಓದಿ : ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿ