ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕಿನ ಎರಡನೇ ಅಲೆ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ 1.15 ಲಕ್ಷ ದಾಖಲೆ ಪ್ರಮಾಣದ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಮುಂದಿನ ನಾಲ್ಕು ವಾರಗಳ ಕಾಲ ತುಂಬಾ ಅಪಾಯಕಾರಿಯಾಗಿರಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ (ಏಪ್ರಿಲ್ 07) ತಿಳಿಸಿದೆ.
ಇದನ್ನೂ ಓದಿ:ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,15,736 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1.28 ಕೋಟಿಗೆ ಏರಿಕೆಯಾಗಿದೆ. 24ಗಂಟೆಯಲ್ಲಿ 630 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ.
ಜಗತ್ತಿನಲ್ಲಿ ಅಮೆರಿಕ, ಬ್ರೆಜಿಲ್ ನಂತರ ಅತೀ ಹೆಚ್ಚು ಕೋವಿಡ್ ಪ್ರಕರಣ ಹೆಚ್ಚಳವಾಗಿರುವ ದೇಶದಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ.
ದೇಶದಲ್ಲಿ ಎಲ್ಲಾ ಸಮುದಾಯಕ್ಕೆ ಶೀಘ್ರವಾಗಿ ಲಸಿಕೆ ನೀಡುವ ಉದ್ದೇಶ ಇಲ್ಲ. ನಾವು ಲಸಿಕೆ ನೀಡಲು ಯಾಕೆ ವಯೋ ಮಿತಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಅಂದರೆ, ಲಸಿಕೆ ಸರಬರಾಜು ಸೀಮಿತವಾಗಿದ್ದು, ಅದಕ್ಕಾಗಿ ಎಲ್ಲಾ ವಯೋಮಾನದವರಿಗೆ ಲಸಿಕೆ ಸದ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.