Advertisement
ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಯ ಸಭೆಯಲ್ಲಿ ವಚ್ಯುìವಲ್ ಮೂಲಕ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜ್ಯದ 18 ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದೇವೆ.
Related Articles
Advertisement
ವೈದ್ಯರು ಹಾಗೂ ದಾದಿಯರ ನಡಿಗೆ ಹಳ್ಳಿಯ ಕಡೆಗೆ ಪುನರಾರಂಭಕ್ಕೆ ಸೂಚಿಸಲಾಗಿದೆ. 264 ಆಕ್ಸಿಜನ್ ಪ್ಲಾಂಟ್‌ಗಳಲ್ಲಿ 222 ಸೇವೆಗೆ ಚಾಲನೆ ನೀಡಲಾಗಿದೆ. 17 ಘಟಕ ಸ್ಥಾಪನೆಗೆ ಕಾರ್ಪೊರೇಟ್ ಕಂಪನಿಗಳು ಇನ್ನೂ ಮುಂದೆ ಬಂದಿಲ್ಲ. ರಾಜ್ಯದಲ್ಲಿ ಮೂರನೇ ಡೋಸ್ ಲಸಿಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಇದುವರೆಗೂ ಶೇ 39 ಜನರಿಗೆ 3ನೇ ಡೋಸ್ ನೀಡಲಾಗಿದೆ. ಇದು ತೃಪ್ತಿದಾಯಕವಾಗಿಲ್ಲ. ಹೀಗಾಗಿ ಮುಂದಿನ ವಾರ ಇದರ ಅಭಿಯಾನ ಮಾಡುತ್ತೇವೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಲಸಿಕೆ ತೆಗೆದುಕೊಳ್ಳದವರ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಆದರೆ, ಸಾವಿನ ಪ್ರಮಾಣ ಕಡಿಮೆ ಇದೆ ಎಂದರು.
ಇದೇ ವೇಳೆ, ಆಹಾರ ಸಚಿವ ಉಮೇಶ ಕತ್ತಿ ಅವರು ಮಾಸ್ಕ್ ಹಾಕದಿರುವ ಬಗ್ಗೆ ನೀಡಿದ ಹೇಳಿಕೆಯನ್ನು ಡಾ. ಸುಧಾಕರ್ ಸಮರ್ಥಿಸಿಕೊಂಡಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಾರೆ ಎಂದರು.
ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ಗೊತ್ತಿಲ್ಲ. ಶುಕ್ರವಾರ ಸಭೆಯಲ್ಲಿ ನಾಯಕರು ಹಾಗೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಲಹೆ ಪಡೆದು ಸಿಎಂ ನಿರ್ಧಾರ ಮಾಡುತ್ತಾರೆ. ನಾವೇ ತೀರ್ಮಾನ ಮಾಡಲು ಆಗುವುದಿಲ್ಲ. ಈ ಬಗ್ಗೆ ಶುಕ್ರವಾರ ಗೊತ್ತಾಗುತ್ತದೆ.-ಡಾ. ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ.