ಬೆಂಗಳೂರು : ಇದೀಗ ದೇಶದಲ್ಲಿ ಕೋವಿಡ್ ಲಸಿಕೆಯ ಅಭಿಯಾನ ಶುರುವಾಗಿದೆ. ಗ್ರಾಮ ಗ್ರಾಮಗಳಲ್ಲಿಯೂ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಇದೇ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಕೇಂದ್ರ ಸರ್ಕಾರದ ವತಿಯಿಂದ ಇಂದು (ಮಂಗಳವಾರ) ರಾಜ್ಯಕ್ಕೆ ಬಂದಿರುವ ಕೋವಿಡ್ ಲಸಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಸುಧಾಕರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್ 12,91,280 ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವ್ಯಾಕ್ಸಿನ್ ಡೋಸ್ 1,44,170 ಎಂದು ತಿಳಿಸಿದ್ದಾರೆ.