ಧಾರವಾಡ: ಜಿಪಂ ಆವರಣದಲ್ಲಿ 1.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ, ಉಪಾಧ್ಯಕ್ಷರು, ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶನಿವಾರ ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸಮ್ಮುಖದಲ್ಲಿ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಶಾಸಕರಾದ ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಡಿಸಿ ನಿತೇಶ ಪಾಟೀಲ, ಜಿಪಂ ಸಿಇಒ ಡಾ| ಬಿ.ಸುಶೀಲಾ, ಸದಸ್ಯರಾದ ಚೈತ್ರಾ ಗುರುಪಾದಪ್ಪ ಶಿರೂರ, ರೇಣುಕಾ ಇಬ್ರಾಹಿಂಪುರ, ಚನ್ನಬಸಪ್ಪ ಮಟ್ಟಿ,ಕರಿಯಪ್ಪ ಮಾದರ ಇದ್ದರು.
ಇದನ್ನೂ ಓದಿ:ಡಿಕೆಶಿಗೆ ಧಮ್ ಇದ್ರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ: ಈಶ್ವರಪ್ಪ
ಉಪಾಧ್ಯಕ್ಷರ ಪ್ರತಿಭಟನೆ: ಇದಕ್ಕೂ ಮುನ್ನ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಅಧಿಕಾರಿಗಳು ಸರಿಯಾಗಿ ಶಿಷ್ಟಾಚಾರ ಪಾಲನೆ ಮಾಡದೆ ತರಾತುರಿಯಲ್ಲಿ ಉದ್ಘಾಟನೆ ಸಮಾರಂಭ ನಡೆಸುತ್ತಿದ್ದಾರೆ ಎಂದು ದೂರಿದರು. ಈ ಸುದ್ದಿ ತಿಳಿದು ಉದ್ಘಾಟನಾ ಸಮಾರಂಭಕ್ಕೂ ಮುನ್ನವೇ ಕರಿಗಾರ ಬಳಿಗೆ ಬಂದ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕರಿಗಾರ ಅವರನ್ನು ಸಮಾಧಾನಪಡಿಸಿ ಸಮಾರಂಭಕ್ಕೆ ಕರೆದುಕೊಂಡು ಹೋದರು.