Advertisement

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

11:37 PM Nov 28, 2024 | Team Udayavani |

ನವದೆಹಲಿ: ದೇಶದಲ್ಲಿ 2000ನೇ ಇಸವಿಯ ಬಳಿಕ ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹಿಸಲಾಗಿದೆ. ಹೀಗೆಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ಫಾಸ್ಟಾಗ್‌ ಜತೆಗೆ ಇಲೆಕ್ಟ್ರಾನಿಕ್‌ ಟೋಲ್‌ ಸಂಗ್ರಹ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿದೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದರು. ಇದೇ ವೇಳೆ, ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಮ್‌ ಆಧಾರಿತ ಟೋಲ್‌ ಸಂಗ್ರಹವನ್ನು ದೇಶದಲ್ಲಿ ಜಾರಿ ಮಾಡಲಾಗಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next