Advertisement
ಇದರಲ್ಲಿ 32,848 ವಿದ್ಯಾರ್ಥಿಗಳು ಫಲಿತಾಂಶ ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಅನುತ್ತೀರ್ಣಗೊಂಡ 89,221 ವಿದ್ಯಾರ್ಥಿಗಳು ಮತ್ತು ಶೇ. 75ರಷ್ಟು ಹಾಜರಾತಿ ಇಲ್ಲದ 17 ವರ್ಷ ತುಂಬಿದ ಖಾಸಗಿಯಾಗಿ ನೋಂದಾಯಿಸಿಕೊಂಡ 139 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮಾಹಿತಿ ನೀಡಿದೆ.
ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶು ಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಮಂಡಳಿ ಸೂಚಿಸಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ ಸೈಟ್ https://kseab.karnatala.gov.in ನಲ್ಲಿ ಪಡೆಯಬಹುದಾಗಿದೆ.
Related Articles
ಈ ಮಧ್ಯೆ ಮೇ 4ಕ್ಕೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಬೇಕಿದ್ದ ಗೃಹ ವಿಜ್ಞಾನ ಪರೀಕ್ಷೆಯನ್ನು ಮೇ 9ಕ್ಕೆ ಮುಂದೂಡಿದ್ದು, ಅಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ.
Advertisement