Advertisement

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

12:33 AM Apr 25, 2024 | Team Udayavani |

ಬೆಂಗಳೂರು: ಎ. 29ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಆರಂಭಗೊಳ್ಳಲಿದ್ದು, ಪರೀಕ್ಷೆಗೆ 1,49,300 ವಿದ್ಯಾರ್ಥಿಗಳು ನೋಂದಾ ಯಿಸಿಕೊಂಡಿದ್ದಾರೆ.

Advertisement

ಇದರಲ್ಲಿ 32,848 ವಿದ್ಯಾರ್ಥಿಗಳು ಫ‌ಲಿತಾಂಶ ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಅನುತ್ತೀರ್ಣಗೊಂಡ 89,221 ವಿದ್ಯಾರ್ಥಿಗಳು ಮತ್ತು ಶೇ. 75ರಷ್ಟು ಹಾಜರಾತಿ ಇಲ್ಲದ 17 ವರ್ಷ ತುಂಬಿದ ಖಾಸಗಿಯಾಗಿ ನೋಂದಾಯಿಸಿಕೊಂಡ 139 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮಾಹಿತಿ ನೀಡಿದೆ.

ಒಟ್ಟು 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿ ನಿ ಯರು ವಾರ್ಷಿಕ ಪರೀಕ್ಷೆ-2ಕ್ಕೆ ನೋಂದಾ ಯಿಸಿಕೊಂಡಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿ¨ªಾರೆ. ರಾಜ್ಯಾದ್ಯಂತ 301 ಪರೀûಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಪ್ರವೇಶ ಪತ್ರ ಡೌನ್‌ಲೋಡ್‌ಗೆ ಅವಕಾಶ
ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶು ಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಮಂಡಳಿ ಸೂಚಿಸಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ ಸೈಟ್‌ https://kseab.karnatala.gov.in ನಲ್ಲಿ ಪಡೆಯಬಹುದಾಗಿದೆ.

ಹೋಮ್‌ ಸೈನ್ಸ್‌ ಪರೀಕ್ಷೆ ಮುಂದೂಡಿಕೆ
ಈ ಮಧ್ಯೆ ಮೇ 4ಕ್ಕೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಬೇಕಿದ್ದ ಗೃಹ ವಿಜ್ಞಾನ ಪರೀಕ್ಷೆಯನ್ನು ಮೇ 9ಕ್ಕೆ ಮುಂದೂಡಿದ್ದು, ಅಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next