Advertisement

1.52 ಲಕ್ಷ ಹೆಕ್ಟೇರ್‌ ಹತ್ತಿ ಬಿತ್ತನೆ: ರಾಗಪ್ರಿಯಾ

06:58 PM Nov 03, 2020 | Suhan S |

ಯಾದಗಿರಿ: ಖರೀದಿ ಕೇಂದ್ರದಲ್ಲಿ ರೈತರ ದಾಖಲಾತಿ ಮಾಹಿತಿಯನ್ನು ಸಮರ್ಪಕವಾಗಿ ತಂತ್ರಾಂಶದಲ್ಲಿ ನಮೂದಿಸಿ ಅರ್ಹ ರೈತರಿಗೆ ಬೆಳೆಯ ಹಣ ತಲುಪುವಂತೆ ಮಾಡಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಇತ್ತೀಚೆಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಕಾಳು ಮತ್ತು ಹತ್ತಿ ಖರೀದಿ ಕೇಂದ್ರಗಳ ಪ್ರಾರಂಭಿಸುವ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖರೀದಿ ಕೇಂದ್ರದಲ್ಲಿ ಸರಿಯಾದ ಸಿಬ್ಬಂದಿ ನಿಯೋಜಿಸಿ ಹಾಗೂ ಸಿಬ್ಬಂದಿಗೆ ಮುಂಚಿತವಾಗಿ ರೈತರ ದಾಖಲಾತಿ ನಮೂದಿಸಿವ ಬಗ್ಗೆ ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಒಟ್ಟು 5 ಹತ್ತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಇದರಲ್ಲಿ ಶಹಾಪುರ ತಾಲೂಕಿನಲ್ಲಿ 3, ಯಾದಗಿರಿ 2 ಖರೀದಿ ಕೇಂದ್ರ ಪ್ರಾರಂಭಿಸಿ ಈ ಖರೀದಿ ಕೇಂದ್ರಗಳಲ್ಲಿ ಒಟ್ಟು 4783 ರೈತರಿಂದ 242235 ಲಕ್ಷ ಕ್ವಿಂಟಲ್‌ ಹತ್ತಿಯನ್ನು ಸರ್ಕಾರದ ಬೆಂಬಲ ಬೆಲೆ 5550 ರೂ. ರಂತೆ ಪ್ರತಿ ಕ್ವಿಂಟಲ್‌ಗೆ ಖರೀದಿಸಲಾಗಿತ್ತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಭೀಯರಾಯ ಕಲ್ಲೂರ ಸಭೆಯಲ್ಲಿ ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಹತ್ತಿ ಬಿತ್ತನೆ ಕ್ಷೇತ್ರ 1.52 ಹೆಕ್ಟೇರ್‌ಗಳಷ್ಟು ಇದ್ದು, ಪ್ರತಿ ಹೆಕ್ಟೇರ್‌ಗೆ ಹತ್ತಿ ಇಳುವರಿ 6 ರಿಂದ 7 ಕ್ವಿಂಟಲ್‌ ಬರಬಹುದು ಎಂದು ಅಂದಾಜಿಸಿಲಾಗಿದೆ ಎಂದು ಅವರು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರ‌ಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 5ರಿಂದ 6 ಹತ್ತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಹಾಗೂ ಜಿಲ್ಲೆಯಲ್ಲಿ ಯಾವ ತಾಲೂಕಿನಲ್ಲಿ ರೈತರಿಂದ ಹೆಚ್ಚು ಬೇಡಿಕೆ ಇರುವ ಸ್ಥಳದಲ್ಲಿ ಹಾಗೂ ಹತ್ತಿ ಬೆಳೆಯ ಕ್ಷೇತ್ರ ಹೆಚ್ಚು ಬೆಳೆಯುವ ತಾಲೂಕುಗಳಲ್ಲಿ ಮತ್ತು ರೈತರಿಗೆ ಅನುಕೂಲವಾಗುವಂತೆ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಬೇಕು. ಹತ್ತಿ ಬೆಳೆಗೆ ನೀರು ಸಿಂಪಡಣೆ ಮಾಡಿ ಮಾರುಕಟ್ಟೆಗೆ ತರುವುದನ್ನು ತಪ್ಪಿಸಿ ಎಂದು ಜಿಲ್ಲಾ ಧಿಕಾರಿಗಳು ಸಂಬಂಧಿಸಿದ ಅಧಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲೆಯಲ್ಲಿ ಕಳೆದ ವರ್ಷ 34 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. 16403 ರೈತರಿಂದ 152000 ಕ್ವಿಂಟಲ್‌ನಷ್ಟು ತೊಗರಿ ಖರೀದಿಸಲಾಗಿತ್ತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಭೀಯರಾಯ ಕಲ್ಲೂರ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 108000 ಸಾವಿರ ಹೆಕ್ಟೇರ್‌ ತೊಗರಿ ಬಿತ್ತನೆಯಾಗಿದ್ದು, ಪ್ರತಿ ಹೆಕ್ಟೇರ್‌ಗೆ 5ರಿಂದ 6 ಕ್ವಿಂಟಲ್‌ ಇಳುವರಿ ಬರುವ ನಿರೀಕ್ಷೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ತೊಗರಿ ಬಿತ್ತನೆ ಕ್ಷೇತ್ರ ಮತ್ತು ರೈತರ ಅಗತ್ಯಕ್ಕೆ ಅನುಗುಣವಾಗಿ ಪ್ರಸಕ್ತ ಸಾಲಿನಲ್ಲಿ 35 ತೊಗರಿ ಖರೀದಿ ಕೇಂದ್ರ ಸ್ಥಾಪಿಸಿಲು ಸರಕಾರಕ್ಕೆಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಸೇರಿದಂತೆ ಸಂಬಂಧಿ ಸಿದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next