Advertisement

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

09:06 PM Apr 11, 2024 | Team Udayavani |

ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1.58 ಕೋಟಿ ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

Advertisement

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ಬೆಳಿಗ್ಗೆ 10.45 ರ ಸಮಯದಲ್ಲಿ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದ ಕೆಎ-17 ಜಡ್-9447 ಸಂಖ್ಯೆಯ ಹುಂಡೈ ವೆನ್ಯೂ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಾಣಿಕೆ ಮಾಡುತ್ತಿದ್ದ ಕಾರ್ತಿಕ್ ಮತ್ತು ಚಿರಂತ್ ಎಂಬುವವರಿಂದ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿ ಎಂ. ರವಿಶಂಕರ್ ಅವರು ಜಪ್ತಿ ಮಾಡಿದ್ದಾರೆ.

ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದಾಯ ತೆರಿಗೆ ಇಲಾಖೆಯ ಅನ್ವೇಷಣೆ ವಿಭಾಗದ ಸಹಾಯಕ ನಿರ್ದೇಶಕ ಆರ್. ರಂಗನಾಥ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಾದ ಜಿ. ರಘು, ಜಿ. ದಿವಾಕರ್ ಅವರಿಂದ ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ಇದನ್ನೂ ಓದಿ: Hindi,ಹಿಂದುತ್ವ, ಹಿಂದೂಸ್ಥಾನ’ ಪ್ರಾಬಲ್ಯ ಬಹುವಚನ ಪ್ರಜ್ಞೆಗೆ ಅಪಾಯಕಾರಿ: ತರೂರ್

Advertisement

Udayavani is now on Telegram. Click here to join our channel and stay updated with the latest news.

Next