Advertisement

ನಟಿ ಶಿಲ್ಪಾ ಶೆಟ್ಟಿ ತಾಯಿಗೆ 1.6 ಕೋಟಿ ರೂ. ವಂಚನೆ

07:04 PM Jul 29, 2021 | Team Udayavani |

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಾಯಿ ಹಾಗೂ ಸಿನಿಮಾ ನಿರ್ಮಾಪಕಿ ಸುನಂದಾ ಶೆಟ್ಟಿ 1.6 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ವಂಕನೋರ್ವ ನಕಲಿ ಜಮೀನು ಪತ್ರಗಳನ್ನು ನೀಡಿ ಮಹಾಮೋಸ ಮಾಡಿದ್ದಾನೆ.

Advertisement

ಸುಧಾಕರ್ ಘರೆ ಎಂಬ ವ್ಯಕ್ತಿ ನಕಲಿ ಪತ್ರಗಳನ್ನು ಸೃಷ್ಟಿಸಿ ತನಗೆ ಜಮೀನು ಮಾರಾಟ ಮಾಡಿ 1.6 ಕೋಟಿ ವಂಚಿಸಿದ್ದಾನೆ ಎಂದು ಸುನಂದಾ ಶೆಟ್ಟಿ ಆರೋಪಿಸಿದ್ದಾರೆ. ವಂಚನೆ ಕುರಿತು ಅವರು ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಂಚನೆ ಪ್ರಕರಣದಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯಕ್ಕೆ ಈ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸಂಕಷ್ಟದಲ್ಲಿ ಅಳಿಯ :

ಇನ್ನು ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ನೀಲಿ ಸಿನಿಮಾ ನಿರ್ಮಾಣ ಹಾಗೂ ವಿತರಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಾಮೀನಿಗಾಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಇದೇ ಪ್ರಕರಣದಡಿ ಶಿಲ್ಪಾ ಶೆಟ್ಟಿಯವರನ್ನು ಮುಂಬೈನ ಕ್ರೈಂ ಬ್ರ್ಯಾಂಚ್ ನ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next