Advertisement

2023 December ತಿಂಗಳಲ್ಲಿ 1.64 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

12:01 AM Jan 02, 2024 | Team Udayavani |

ನವದೆಹಲಿ: ಕಳೆದ ವರ್ಷದ ಡಿಸೆಂಬರ್‌ ತಿಂಗಳಲ್ಲಿ 1.64 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವಾಗಿದೆ. 2022ರ ಡಿಸೆಂಬರ್‌ಗೆ ಹೋಲಿಸಿದರೆ(1.49 ಲಕ್ಷ ಕೋಟಿ ರೂ.) 2023ರ ಡಿಸೆಂಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಶೇ.10ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ. ಕಳೆದ ವರ್ಷದ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಒಟ್ಟಾರೆ ಜಿಎಸ್‌ಟಿ ಶೇ.12ರಷ್ಟು ಏರಿಕೆ ಕಂಡಿದ್ದು, 14.97 ಲಕ್ಷ ಕೋಟಿ ರೂ. ಆಗಿತ್ತು. ಅದಕ್ಕೂ ಹಿಂದಿನ ವರ್ಷದ ಇದೇ ಅವಧಿಯಲ್ಲಿ ಈ ಮೊತ್ತ 13.40 ಲಕ್ಷ ಕೋಟಿ ರೂ. ಆಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next