Advertisement

45 ದಿನಗಳ ಬಳಿಕ ಇಳಿಕೆ…ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1.73 ಲಕ್ಷ ಕೋವಿಡ್ ಪ್ರಕರಣ ಪತ್ತೆ

10:21 AM May 29, 2021 | Team Udayavani |

ನವದೆಹಲಿ:ಭಾರತದಲ್ಲಿ ಕೋವಿಡ್ ಎರಡನೇ ಅಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು ಕಳೆದ 24ಗಂಟೆಗಳಲ್ಲಿ 1.73 ಲಕ್ಷ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, ಇದು ಕಳೆದ 45 ದಿನಗಳಲ್ಲಿ ಅತೀ ಕಡಿಮೆ ಪ್ರಮಾಣದ್ದಾಗಿದೆ ಎಂದು ಶನಿವಾರ(ಮೇ 29) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕೋವಿಡ್ ಕಾಟದಿಂದಾಗಿ ಕೆಲಸವಿಲ್ಲದೇ ಸಂಕಷ್ಟ: ಬಾಣಸಿಗರ ಬದುಕು ಬೀದಿಗೆ

ಕಳೆದ ವರ್ಷ ಮೇ ತಿಂಗಳಿನಲ್ಲಿ ದಾಖಲೆ ಪ್ರಮಾಣದ 4.14 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿತ್ತು. ಕಳೆದ ಐದು ದಿನಗಳಿಂದ ದೇಶದಲ್ಲಿ ಪಾಸಿಟಿವಿಟಿ ದರ ಶೇ.10ಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1.73 ಲಕ್ಷ ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2.77 ಕೋಟಿಗೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 3,617 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ ಈವರೆಗೆ 3,22,512ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ 20.89 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 30,62,747 ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ. 24 ಗಂಟೆಗಳಲ್ಲಿ 2,84,601 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next