Advertisement

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

02:58 PM Jun 06, 2023 | Team Udayavani |

ಇಂಫಾಲ್: ಮಣಿಪುರದಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಓರ್ವ ಬಿಎಸ್‌ಎಫ್ ಯೋಧ  ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡ ಘಟನೆ ನಡೆದಿದೆ.

Advertisement

ಜೂ. 5-6ರ ಮಧ್ಯರಾತ್ರಿಯಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವಿನ ಗುಂಡಿನ ದಾಳಿಯಲ್ಲಿ ಮಣಿಪುರದ ಸೆರೌ ಪ್ರದೇಶದಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡು ಗಡಿ ಭದ್ರತಾ ಪಡೆ (ಬಿಎಸ್ಎಫ್) ನ ಓರ್ವ ಯೋಧ ಸಾವನ್ನಪ್ಪಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.


ಮಣಿಪುರದ ಸುಗ್ನು/ಸೆರೌ ಪ್ರದೇಶಗಳಲ್ಲಿ ಅಸ್ಸಾಂ ರೈಫಲ್ಸ್, ಬಿಎಸ್‌ಎಫ್ ಮತ್ತು ಪೊಲೀಸರಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಕೂಡ ಪ್ರತಿದಾಳಿ ನಡೆಸಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next