Advertisement

40 ಮಕ್ಕಳಿದ್ದ ಶಾಲಾ ಬಸ್ ಅಪಘಾತ : ಓರ್ವ ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ

06:52 PM Sep 27, 2022 | Team Udayavani |

ಮಧ್ಯಪ್ರದೇಶ: 40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್‌ನ ರಹತ್‌ಗಢದಲ್ಲಿ ಮಂಗಳವಾರ ನಡೆದಿದೆ.

Advertisement

ಉಳಿದ 37 ಮಕ್ಕಳು ಸುರಕ್ಷಿತವಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಾಗರದ ಜಿಲ್ಲಾಧಿಕಾರಿ ದೀಪಕ್ ಆರ್ಯ ಹೇಳಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಗುವಿನ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next