Advertisement

ಕ್ಷುಲ್ಲಕ ಕಾರಣಕ್ಕೆ ಜೈಪುರದಲ್ಲಿ ಹಿಂಸಾಚಾರ: ಕರ್ಫ್ಯೂ 

10:03 AM Sep 09, 2017 | Team Udayavani |

ಜೈಪುರ: ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ರಾತ್ರಿ ಹಿಂಸಾಚಾರ ಭುಗಿಲೆದ್ದಿದ್ದು,ಓರ್ವ ಸಾವನ್ನಪ್ಪಿ ಹಲವರು  ಗಾಯಗೊಂಡಿದ್ದಾರೆ. ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 

Advertisement

ರಾಮ್‌ಗಂಜ್‌ ಪ್ರದೇಶದಲ್ಲಿ ದೈನಂದಿನ ಪರಿಶೀಲನೆ ವೇಳೆ ಬೈಕ್‌ ಸವಾರನೊಬ್ಬನನ್ನು ಪೊಲೀಸರು ತಡೆದಿದ್ದು ,ಈ ವೇಳೆ ಆತ ಪರಾರಿಯಾಗಲೆತ್ನಿಸಿದ್ದು ಪೊಲೀಸರು ತಡೆದು ಥಳಿಸಿದ್ದಾರೆ ಎನ್ನಲಾಗಿದೆ. ಆ ಬಳಿಕ ನೂರಾರು ಜನರು ಪೊಲೀಸ್‌ ಠಾಣೆಯ ಎದುರು ಗುಂಪುಗೂಡಿ ಹಲವು ವಾಹಗಳಿಗೆ ಬೆಂಕಿ ಹಚ್ಚಿ, ಸಿಕ್ಕ ಸಿಕ್ಕಲ್ಲಿ ಕಲ್ಲು ತೂರಿದ್ದಾರೆ. ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು ಹಲವರು ಗಾಯಗೊಂಡಿದ್ದಾರೆ.

ಇದೀಗ ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಘಟನೆಯ ವರದಿ ಮಾಡಲು ತೆರಳಿದ ಪತ್ರಕರ್ತರ ಮೇಲೂ ಉದ್ರಿಕ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next