ಪಾಟ್ನಾ: ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಹಲವಾರು ಕಾರ್ಮಿಕರು ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಹಲವು ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದ್ದು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
2014 ರಂದು ಇಲ್ಲಿನ ಕೋಸಿ ನದಿಗೆ 984 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು ಆ ಬಳಿಕ ಆರಂಭವಾದ ಸೇತುವೆ ನಿರ್ಮಾಣ ಕಾರ್ಯ ಇಂದಿನವರೆಗೆ ನಡೆಯುತ್ತಿದೆ ಆದರೆ ಇಂದು ಬೆಳಿಗ್ಗೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ ಕುಸಿದು ಬಿದ್ದ ಸೇತುವೆಯ ಭಾಗಗಳ ಅಡಿಯಲ್ಲಿ ಸುಮಾರು ಮೂವತ್ತು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಇದನ್ನೂ ಓದಿ: PM Modi Bhutan Tour: ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ