Advertisement

ಕಾಬೂಲ್‌: ಉಗ್ರರ ಆತ್ಮಾಹುತಿ ದಾಳಿಗೆ 11 ಜನ ದುರ್ಮರಣ; 25 ಮಂದಿಗೆ ಗಾಯ

09:40 AM Jan 05, 2018 | |

ಕಾಬೂಲ್‌: ಅಫ್ಘಾನ್‌ ರಾಜಧಾನಿ ಕಾಬೂಲ್‌ ಪ್ರದೇಶದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 11 ಜನ ಸಾವನ್ನಪ್ಪಿ, 25ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ವರದಿಯಾಗಿದೆ.

Advertisement

ಮೂಲಗಳ ಪ್ರಕಾರ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕಾಬೂಲ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಆತ್ಮಾಹುತಿ ದಾಳಿ ಯಲ್ಲಿ ಪೊಲೀಸರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದಾರೆ. 

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಾಲಾಗಿದೆ. ದಾಳಿಯ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ. 

Advertisement

Udayavani is now on Telegram. Click here to join our channel and stay updated with the latest news.

Next