Advertisement

ಪರಿಶಿಷ್ಟ ಗುತ್ತಿಗೆದಾರರಿಗೆ 1 ಕೋ. ರೂ. ಕಾಮಗಾರಿಗೆ ಟೆಂಡರ್‌ ವಿನಾಯಿತಿ

11:15 PM Jul 14, 2023 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಸಮುದಾಯದ ಗುತ್ತಿಗೆದಾರರಿಗೆ 1 ಕೋಟಿ ರೂ. ಮೊತ್ತದವರೆಗಿನ ಕಾಮಗಾರಿಗಳಿಗೆ ಟೆಂಡರ್‌ ವಿನಾಯಿತಿ ನೀಡಲು ಅನುಕೂಲ ಆಗುವಂತೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಗೆ ವಿಧಾನಸಭೆಯಲ್ಲಿ ಶುಕ್ರವಾರ ಅನುಮೋದನೆ ದೊರೆತಿದೆ. ಪರಿಷತ್ತಿನಲ್ಲಿ ಅನುಮೋದನೆ ದೊರೆತು ರಾಜ್ಯಪಾಲರ ಸಹಿ ಆದ ಬಳಿಕ ಇದು ಕಾನೂನು ಆಗಿ ಜಾರಿಗೊಳ್ಳಲಿದ್ದು, ಇನ್ನು ಮುಂದೆ 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಶೇ.17.15ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಸಿಗಲಿದೆ.

Advertisement

ಈ ಹಿಂದೆ 50 ಲಕ್ಷ ರೂ.ವರೆಗಿನ ಮೀಸಲಾತಿಯನ್ನು ಮೀಸಲಿಟ್ಟಾಗ ಮೊದಲ ಬಾರಿಗೆ ಶೇ.62ರಷ್ಟು ಪರಿಶಿಷ್ಟ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗಿಯಾಗಿದ್ದರೆ, ಎರಡನೇ ಕರೆಯಲ್ಲಿ ಶೇ.80ರಷ್ಟು ಪರಿಶಿಷ್ಟ ಗುತ್ತಿಗೆದಾರರು ಪಾಲ್ಗೊಂಡಿದ್ದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾಮಗಾರಿಗಳಿಗೆ ಈ ಸಮುದಾಯಕ್ಕೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮಾಯಿ ಸ್ವಾಗತ
ಎಸ್ಸಿ, ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್‌ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ ತಿದ್ದುಪಡಿ ಮಾಡಿ 50 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಿಸಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next