Advertisement
ಮುಂದಿನ ಜನವರಿಯಲ್ಲಿ ನಡೆಯುವ 25 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್, ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾವಾರು ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ಸಭೆಯಲ್ಲಿ ಜಿಲ್ಲಾ ಮುಖಂಡರುಗಳಿಗೆ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರಿಷತ್ ಚುನಾವಣೆಗೆ ಟಿಕೆಟ್ ಗೆ ಅರ್ಜಿ ಸಲ್ಲಿಸಲು 1 ಲಕ್ಷ ರೂ. ನಿಗದಿ ಮಾಡಿದ್ದಾರೆ ಎನ್ನಲಾಗಿದ್ದು, ಆ ಹಣವನ್ನು ಪಕ್ಷದ ಕಚೇರಿ ನಿರ್ಮಾಣಕ್ಕೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟಿಕೆಟ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕ್ಷೇತ್ರದಲ್ಲಿ ಅವರ ಕಾರ್ಯ ಚಟುವಟಿಕೆ, ಅವರ ವರ್ಚಸ್ಸು, ಜನರೊಂದಿಗೆ ಸಂಪರ್ಕ ಪಕ್ಷದ ನಾಯಕರೊಂದಿಗೆ ಹೊಂದಿರುವ ಸಂಬಂಧದ ಕುರಿತು ಸಂದರ್ಶನ ನಡೆಸಿ, ಬಳಿಕ ಟಿಕೆಟ್ ನೀಡಲು ಕೆಪಿಸಿಸಿ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.