ಮಣಿಪುರ: ಮಂಗಳವಾರ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಾಹಿತಿಯ ಪ್ರಕಾರ ಕುಕಿ-ಜೋ ಗ್ರಾಮದಲ್ಲಿ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ಮಾಡಿದ್ದಾರೆ.
ಗ್ರಾಮದ ಸ್ವಯಂಸೇವಕರು ಭಾರೀ ಗುಂಡಿನ ದಾಳಿಗೆ ಪ್ರತಿಯಾಗಿ ಪ್ರತಿದಾಳಿ ನಡೆಸಿದ್ದರಿಂದ ಮೂವತ್ತು ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಲ್ಲಿ ಸಣ್ಣ ಪುಟ್ಟ ಘರ್ಷಣೆಗಳು ನಡೆಯುತ್ತಿವೆ ಅದರಂತೆ ಕುಕಿ-ಜೋ ಗ್ರಾಮದಲ್ಲಿ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದು ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಕುಕಿ ಜೋ ಗ್ರಾಮದಲ್ಲಿ ಜಿಲ್ಲಾ ಪೊಲೀಸರು, ಅಸ್ಸಾಂ ರೈಫಲ್ಸ್, ಕೇಂದ್ರ ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಏತನ್ಮಧ್ಯೆ, ಪ್ರತ್ಯೇಕ ಕಾರ್ಯಾಚರಣೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Daily Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ