Advertisement

Manipura ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಸ್ಫೋಟ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

09:48 AM Feb 24, 2024 | Team Udayavani |

ಇಂಫಾಲ: ಮಣಿಪುರದ ಇಂಫಾಲ್‌ನಲ್ಲಿ ಶುಕ್ರವಾರ ವಿಶ್ವವಿದ್ಯಾನಿಲಯದ ಆವರಣದ ಒಳಗೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿರುವುದಾಗಿವರದಿಯಾಗಿದೆ.

Advertisement

ಸುಧಾರಿತ ಸ್ಫೋಟಕ ಸಾಧನ (ಐಇಡಿ) ದಿಂದ ಈ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಪೋಟದಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ, ಇನ್ನೋರ್ವ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಸಂಘರ್ಷದ ಬಳಿಕ ಸದಾ ಒಂದಿಲ್ಲೊಂದು ಘಟನೆಗಳು ನಡೆಯುತ್ತಲೇ ಇರುತ್ತವೆ. ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: UCC ಜಾರಿಗೆ ಮುಂದಾದ ಅಸ್ಸಾಂ… ಮುಸ್ಲಿಂ ವಿವಾಹ, ವಿಚ್ಛೇದನ ಕಾಯ್ದೆ ನಿಷೇಧಕ್ಕೆ ನಿರ್ಧಾರ

Advertisement
Advertisement

Udayavani is now on Telegram. Click here to join our channel and stay updated with the latest news.

Next