Advertisement

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

11:55 PM Sep 20, 2024 | Team Udayavani |

ಮೈಸೂರು: ದೇಶದಲ್ಲಿ ಮುಂಬರುವ ವರ್ಷಗಳಲ್ಲಿ 1 ಲಕ್ಷ ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌ ಹೇಳಿದರು.

Advertisement

ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕೇಂದ್ರ ರೇಷ್ಮೆ ಮಂಡಳಿಯ ಅಮೃತ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿ ಪೂರಕ ಯೋಜನೆ ಪ್ರಸ್ತುತ ನಮ್ಮ ದೇಶದಲ್ಲಿ 40 ಸಾವಿರ ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆಯಾಗುತ್ತಿದೆ. 10 ವರ್ಷಗಳ ಹಿಂದೆ 20 ಸಾವಿರ ಮೆಟ್ರಿಕ್‌ ಟನ್‌ ಉತ್ಪಾದನೆ ಮಾಡಲಾಗುತ್ತಿತ್ತು. ನೆರೆಯ ದೇಶವಾದ ಚೀನ 50 ಸಾವಿರ ಮೆಟ್ರಿಕ್‌ ಟನ್‌ನಿಂದ 94 ಸಾವಿರ ಮೆಟ್ರಿಕ್‌ ಟನ್‌ಗೆ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿದೆ. ನಮ್ಮ ದೇಶದಲ್ಲಿ ಉತ್ಪಾದನೆಯನ್ನು ಹೆಚ್ಚು ಮಾಡಿ ವಿಶ್ವದಲ್ಲಿ ಒಂದನೇ ಸ್ಥಾನ ಪಡೆಯಲು ನಾವು ಧನತ್ಮಾಕವಾದ ಹೆಜ್ಜೆಗಳನ್ನು ಇಡಬೇಕು ಎಂದರು.

ರೈತರ ಅದಾಯ ಹೆಚ್ಚಳ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ರೈತರ ಅದಾಯವನ್ನು ಹೆಚ್ಚಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕದಲ್ಲಿ ತೆಂಗು ಬೆಳೆಯು ತುಮಕೂರು ಹಾಗೂ ರಾಮನಗರ ಜಿಲ್ಲೆ ಯಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ. ರೇಷ್ಮೆಯನ್ನು ಕರ್ನಾಟಕದ ಇತರ ಜಿಲ್ಲೆ ಗಳಲ್ಲಿ ಬೆಳೆಯುತ್ತಾರೆ. ರೇಷ್ಮೆಯನ್ನು ಬೆಳೆಯುವ ರೈತರು ತಮ್ಮ ಜಮೀನಿನ ಬದುವಿನಲ್ಲಿ ತೆಂಗು ಬೆಳೆಯನ್ನು ಬೆಳೆದರೆ ಆರ್ಥಿಕವಾಗಿಯೂ ಸುಸ್ಥಿರಗೊಳ್ಳಬಹುದು ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next