Advertisement

ಜಮ್ಮುಕಾಶ್ಮೀರ: ಭದ್ರತಾ ಪಡೆಗಳು-ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರನ ಹತ್ಯೆ

09:23 AM Apr 18, 2020 | Mithun PG |

ಜಮ್ಮುಕಾಶ್ಮೀರ: ಇಂದು ಬೆಳಗ್ಗೆ  ಶೋಪಿಯಾನ್ ಜಿಲ್ಲೆಯ ಡೈರೂ ಕೀಗಮ್ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

Advertisement

ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಪಡೆದ ಪೊಲೀಸ್, ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡದಿಂದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸಿತ್ತು.

ಈ ವೇಳೆ ಉಗ್ರರು ಗುಂಡು ಹಾರಿಸಿದ್ದರಿಂದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಓರ್ವ ಉಗ್ರನನ್ನು ಎನ್ ಕೌಂಟರ್ ಮೂಲಕ ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿದೆ.

2-3  ಉಗ್ರರು ಈ ಪ್ರದೇಶದಲ್ಲಿ ಸೆರೆಸಿಕ್ಕಿದ್ದಾರೆಂದು ಪ್ರಾಥಮಿಕವಾಗಿ ವರದಿಯಾಗಿದ್ದು ಇನ್ನೂ ಖಚಿತವಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು  ಇಂಡಿಯಾ ಟುಡೇ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next