ಶ್ರೀನಗರ: ಭಾನುವಾರ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಡೆದ ಎನ್ ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭಾರತದ ಭದ್ರತಾ ಪಡೆ ಯಶಸ್ವಿಯಾಗಿದೆ.
ಭದ್ರತಾ ಪಡೆಗಳಿಂದ ಕಾಶ್ಮೀರದ ಅವಂತಿಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಭಾನುವಾರ ಉಗ್ರರಿಂದ ಕಾಶ್ಮೀರಿ ಪಂಡಿತರ ಹತ್ಯೆ ನಡೆದಿತ್ತು, ಇದರಿಂದ ಕಾರ್ಯಾಚರಣೆಗೆ ಇಳಿದ ಭದ್ರತಾ ಪಡೆ ಮೊದಲು ಓರ್ವನನ್ನು ಎನ್ ಕೌಂಟರ್ ಮಾಡಿತ್ತು ಬಳಿಕ ಕಾರ್ಯಾಚರಣೆ ಮುಂದುವರೆಸಿ ಇನ್ನೋರ್ವ ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ.
ಈ ಹಿಂದೆ ಹತನಾದ ಉಗ್ರನನ್ನು ಅಕಿಬ್ ಮುಸ್ತಾಕ್ ಭಟ್ ಎಂದು ಗುರುತಿಸಲಾಗಿದೆ. ಈತ ಭಾನುವಾರ ಪುಲ್ವಾಮಾದಲ್ಲಿ 40 ವರ್ಷದ ಕಾಶ್ಮೀರಿ ಪಂಡಿತ್ ಬ್ಯಾಂಕ್ ಗಾರ್ಡ್ ಮೇಲೆ ಗುಂಡು ಹಾರಿಸಿದ ದಾಳಿಕೋರರಲ್ಲಿ ಒಬ್ಬನಾಗಿದ್ದ.
Related Articles
ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದು ಈ ವೇಳೆ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ.
ಎನ್‌ಕೆ ಹೇಮರಾಜ್ ಮತ್ತು ಸಿಟಿ ಪವನ್ ಎಂಬ ಇಬ್ಬರು ಭದ್ರತಾ ಅಧಿಕಾರಿಗಳು ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ 92 ಮೂಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯಚರಣೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಹನೂರು: ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು, ಬಿಜೆಪಿಗೆ ಎರಡನೇ ಸ್ಥಾನ