ಜಮ್ಮು-ಕಾಶ್ಮೀರ: ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ (ಜುಲೈ 30) ನಡೆದಿದೆ.
ಇದನ್ನೂ ಓದಿ:ಬೆಂಗಳೂರಿಗೂ ಕಾಲಿಟ್ಟ ಮಂಕಿಪಾಕ್ಸ್: ಇಥಿಯೋಪಿಯದಿಂದ ಬಂದ ವ್ಯಕ್ತಿಗೆ ಸೋಂಕು
ವಸತಿ ಪ್ರದೇಶದಲ್ಲಿ ಅಡಗಿ ಕೊಂಡಿರುವ ಇಬ್ಬರು ಉಗ್ರರ ಪೈಕಿ ಓರ್ವ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾರಾಮುಲ್ಲಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕ್ರೀರಿ ಪ್ರದೇಶದ ವಾನಿಗಮ್ ಬಾಲಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾಪಡೆಯ ಎನ್ ಕೌಂಟರ್ ನಲ್ಲಿ ಉಗ್ರ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಬಂಧಿಸಿರುವುದಾಗಿ ವರದಿ ವಿವರಿಸಿದೆ.