ಶ್ರೀನಗರ: ಶುಕ್ರವಾರ ಕಾಶ್ಮೀರದ ಕಥುವಾದಲ್ಲಿ ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮರಾದ ಬೆನ್ನಲ್ಲೇ ಭದ್ರತಾ ಪಡೆ ಹಾಗೂ ಪೊಲೀಸರು ಇಂದು (ಶನಿವಾರ) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅರಣ್ಯ ಪ್ರದೇಶದಲ್ಲಿ ಉಗ್ರರ ಕಾರ್ಯಾಚರಣೆ ಕುರಿತು ಗುಪ್ತಚರ ಮಾಹಿತಿಯ ಮೇರೆಗೆ ಶುಕ್ರವಾರ ತಡರಾತ್ರಿ ಕಾರ್ಯಾಚರಣೆ ಆರಂಭಿಸಿದ ಭದ್ರತಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಬೆಳಿಗ್ಗೆ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ತಾಪರ್ ಕ್ರೀರಿಯಲ್ಲಿ ಗುಂಡಿನ ದಾಳಿ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶುಕ್ರವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿಗಳು ಹತರಾಗಿದ್ದರು. ಇದಾದ ಬಳಿಕ ಪ್ರತ್ಯೇಕ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ತಂಡ ಶನಿವಾರ ಬೆಳಿಗ್ಗೆ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಇದನ್ನೂ ಓದಿ: Muddebihal: ರಿಕ್ಷಾ – ಕ್ಯಾಂಟರ್ ನಡುವೆ ಭೀಕರ ಅಪಘಾತ… ಓರ್ವ ಸ್ಥಳದಲ್ಲೇ ಮೃತ್ಯು