Advertisement

ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ 1 ವಾರ ಗಡುವು

09:49 PM May 24, 2024 | Team Udayavani |

ಬೆಂಗಳೂರು: ರಾಜ್ಯದ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ತತ್‌ಕ್ಷಣವೇ ಪ್ರಕಟಿಸಬೇಕು ಎಂದು ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ.

Advertisement

ಒಂದು ವಾರದೊಳಗೆ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದಿದ್ದರೆ ಶಾಲಾ ಶಿಕ್ಷಣ ಆಯುಕ್ತರ ಕಚೇರಿ ಮುಂದೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಅಸೋಸಿಯೇಟೆಡ್‌ ಮ್ಯಾನೇಜ್‌ಮೆಂಟ್‌ ಸ್ಕೂಲ್‌ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌, ಅನಧಿಕೃತ ಶಾಲೆಗಳನ್ನು ಗುರುತಿಸಿ ಪಟ್ಟಿ ಮಾಡುವಂತೆ ಸಂಘಟನೆಯು ಹಲವು ಬಾರಿ ಶಿಕ್ಷಣ ಇಲಾಖೆಯನ್ನು ಆಗ್ರಹಿಸಿತ್ತು.

ಆದರೆ ಸರಕಾರ ಈಗ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅನಧಿಕೃತ ಶಾಲೆಗಳ ಪಟ್ಟಿ ಮಾಡುವಲ್ಲಿ ವಿಫ‌ಲವಾಗಿದೆ ಎಂದು ದೂರಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next