Advertisement

ಪ್ರಯೋಗಾಲಯ ಅಭಿವೃದ್ಧಿಗೆ 10 ಕೋಟಿ

12:01 PM Aug 21, 2018 | Team Udayavani |

ಬೆಂಗಳೂರು: ರಾಜ್ಯದ ಹತ್ತು ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳ ಪ್ರಯೋಗಾಲಯಗಳ ಅಭಿವೃದ್ಧಿಗೆ ತಲಾ 10 ಕೋಟಿ ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳ ಪ್ರಯೋಗಾಲಯದಲ್ಲಿ ಆಧುನಿಕ ಉಪಕರಣ ಸೇರಿದಂತೆ ಸೂಕ್ತ ಸೌಲಭ್ಯ ಇಲ್ಲ ಎಂಬ ದೂರು ಇದು.

Advertisement

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಯೋಗಾಲಯಗಳ ಮೌಲ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯದ 10 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಯೋಗಾಲದಲ್ಲಿ ಹಾಲಿ ಇರುವ ಉಪಕರಣಗಳು ಮತ್ತು ಅಗತ್ಯವಾಗಿ ಬೇಕಿರುವ ಉಪಕರಣಗಳು, ವಿದ್ಯಾರ್ಥಿಗಳ ಅಂಕಿ ಅಂಶ ಸಹಿತ ಎಲ್ಲ ಮಾಹಿತಿಯನ್ನು ಶೀಘ್ರವೇ ಕಳಿಸಿಕೊಡುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ಎಲ್ಲ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next