Advertisement

ಆಗುಂಬೆ ಘಾಟಿಯಲ್ಲಿ 10 ದಿನ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ ಯಾವುದು?

06:11 PM Mar 03, 2022 | Team Udayavani |

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

Advertisement

ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ.

ಯಾವುದು ಪರ್ಯಾಯ ಮಾರ್ಗ?

ಪ್ರಸ್ತುತ ಮಾರ್ಗ: ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಉಡುಪಿ, ಮಂಗಳೂರು

ಪರ್ಯಾಯ ಮಾರ್ಗ

Advertisement

ಲಘು ವಾಹನಗಳಿಗೆ – ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟ್, ಕಾರ್ಕಳ, ಉಡುಪಿ

ಇದನ್ನೂ ಓದಿ:ತೈಲ ಬೆಲೆ ಏರಿಕೆ ಮುನ್ಸೂಚನೆ ಎಫೆಕ್ಟ್ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

ಭಾರಿ ವಾಹನಗಳು- ಶಿವಮೊಗ್ಗ, ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಚಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next